ಬುಧವಾರ, ಮೇ 18, 2022
28 °C
ಮತ್ತಾವರದ ಪ್ರಕೃತ್‌ ಹತ್ಯೆ ಪ್ರಕರಣ

ಹತ್ಯೆ ಪ್ರಕರಣ: ಮೂವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ತಾಲ್ಲೂಕಿನ ಮತ್ತಾವರ ಗ್ರಾಮದ ಪ್ರಕೃತ್‌ (30) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನಾಗರಾಜ ಸಹಿತ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಮತ್ತಾವರ ಗ್ರಾಮದ ನಾಗರಾಜ, ಭೈರೇಗೌಡ, ಮತ್ತು ಚಂದ್ರೇಗೌಡ ಬಂಧಿತರು. ನಾಗರಾಜ ತೋಟದಲ್ಲಿ ತಲೆಮರೆಸಿಕೊಂಡಿರುವ ಸುಳಿವು ಸಿಕ್ಕಿತ್ತು. ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಶುಕ್ರವಾರ ಪತ್ತೆ ಮಾಡಲಾಗಿದೆ.

ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಕೋರ್ಟ್‌ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಏನಿದು ಪ್ರಕರಣ: ಮತ್ತಾವರದ ಪ್ರಕೃತ್‌ ಅವರನ್ನು ನ.3ರಂದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ತೋಟದ ಹಾದಿಯಲ್ಲಿ ರಕ್ತಸಿಕ್ತ ಮೃತದೇಹ ಪತ್ತೆಯಾಗಿತ್ತು.

ಗ್ರಾಮಾಂತರ ಠಾಣೆಯಲ್ಲಿ ಮೂವರ ವಿರುದ್ಧ ದೂರು ದಾಖಲಾಗಿತ್ತು. ಐಪಿಸಿ 302 (ಕೊಲೆ), 201 (ಸಾಕ್ಷ್ಯ ನಾಶ), 114 (ದುಷ್ಪ್ರೇರಕನ ಹಾಜರಿ), 34 (ಅಪರಾಧ ಸಂಚು) ಪ್ರಕರಣ ದಾಖಲಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು