ಕೊಲೆ ಪ್ರಕರಣ: ಮೃತದೇಹ ಪತ್ತೆಗೆ ಚಾರ್ಮಾಡಿ ಘಾಟಿಯಲ್ಲಿ ನಡೆದ ಹುಡುಕಾಟ ಅಂತ್ಯ

ಕೊಟ್ಟಿಗೆಹಾರ: ಒಂಬತ್ತು ತಿಂಗಳ ಹಿಂದೆ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಲೆಯಾದ ಯುವಕನ ಮೃತದೇಹದ ಶೋಧಕ್ಕಾಗಿ ಚಾರ್ಮಾಡಿ ಘಾಟಿ ಪ್ರದೇಶಕ್ಕೆ ಬಂದಿದ್ದ ಬೆಂಗಳೂರು ಪೊಲೀಸರು ಗುರುವಾರ ಹುಡುಕಾಟ ನಿಲ್ಲಿಸಿ, ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ಆರೋಪಿಗಳು ಶವ ಎಸೆದ ಜಾಗವನ್ನು ಗುರುತಿಸಲು ವಿಫಲವಾಗಿರುವುದರಿಂದ ಶೋಧ ಕಾರ್ಯ ವಿಳಂಬವಾಯಿತು. ಮೂರು ದಿನ ಕಬ್ಬನ್ ಪಾರ್ಕ್ ಮತ್ತು ಅಶೋಕನಗರ ಪೊಲೀಸರು, ಮೂಡಿಗೆರೆಯ ಸಾಮಾಜಿಕ ಸಕ್ರಿಯ ಕಾರ್ಯಕರ್ತರು, ಸಮಾಜ ಸೇವಕ ಮೊಹಮ್ಮದ್ ಆರೀಫ್ ಹಾಗೂ ಸ್ಥಳೀಯರ ಸಹಕಾರದಿಂದ ಚಾರ್ಮಾಡಿ ಅಣ್ಣಪ್ಪ ಸ್ವಾಮಿ ದೇವಸ್ಥಾನದಿಂದ ಮುಂದಿನ ಪ್ರಪಾತ, ಸೋಮನಕಾಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಶವ ಹಾಕಿದ್ದ ಗೋಣಿಚೀಲ ಸಿಕ್ಕರೂ, ಮೃತದೇಹ ಪತ್ತೆಯಾಗಿರಲಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.