ನರಸಿಂಹರಾಜಪುರ: ರೈತರು ಜಮೀನು ಒತ್ತುವರಿ ಮಾಡಿಕೊಂಡು ಅರ್ಜಿ ನಮೂನೆ 50, 53, 57, 94ಸಿ, 94ಸಿಸಿ ಸಲ್ಲಿಸಿದ ಮತ್ತು ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆ, 1978ಕ್ಕಿಂತ ಹಿಂದೆ ಒತ್ತುವರಿ ಮಾಡಿಕೊಂಡು ಅರ್ಜಿ ಸಲ್ಲಿಸಿರುವ ಪ್ರಕರಣಗಳು ಇತ್ಯರ್ಥವಾಗುವವರೆಗೂ ಒತ್ತುವರಿ ತೆರವುಗೊಳಿಸಬಾರದು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.