ನರಸಿಂಹರಾಜಪುರ: ಪಟ್ಟಣದ ಬಸ್ತಿಮಠದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ನಡೆಯಿತು.

ಶಾಲಾ ಮಕ್ಕಳನ್ನು ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ಮಕ್ಕಳಿಗೆ ಸಮವಸ್ತ್ರ ಪಠ್ಯ ಪುಸ್ತಕ ವಿತರಿಸಲಾಯಿತು. ಮಕ್ಕಳ ಪೋಷಕರನ್ನು ಸ್ವಾಗತಿಸಲಾಯಿತು. ಪ್ರಸಕ್ತ ಸಾಲಿನಿಂದ ಆರಂಭಿಸಿರುವ ಎಲ್ಕೆಜಿ ತರಗತಿಯನ್ನು ಉದ್ಘಾಟಿಸಲಾಯಿತು.

ಪೋಷಕರ ಸಭೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ನೇತ್ರಾವತಿ, 2026–27ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿಯಲ್ಲಿರುವ ಸರ್ಕಾರದ ಸೌಲಭ್ಯಗಳು ಹಾಗೂ ಶಾಲೆಯಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಪಿ.ಜೆ. ಆಂಟನಿ, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ಎನ್. ಶಿವದಾಸ್, ನಾಗಲಾಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ರೀನಾ ಬೆನ್ನಿ ವಿವಿಧ ಸವಲತ್ತುಗಳನ್ನು ವಿತರಿಸಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ, ಸದಸ್ಯರು, ಸಹ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಾಲೆಯನ್ನು ಹಸಿರು ತೋರಣಗಳಿಂದ ಶೃಂಗರಿಸಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-126-1653882512

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.