ನರಸಿಂಹರಾಜಪುರ: ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಬಡವರ ಬದುಕಿನ ಬಗ್ಗೆ ಇರುವ ತಾತ್ಸಾರದ ಕಾರಣದಿಂದ ಅಡುಗೆ ಅನಿಲದ ಕೊರತೆ ಉದ್ಭವಿಸಿದೆ’ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಕೆ.ಪಿ. ಅಂಶುಮಂತ್ ಆರೋಪಿಸಿದರು.

ಸಿಲಿಂಡರ್ ಪೂರೈಕೆ ವ್ಯತ್ಯಯ ಹಾಗೂ ಬೆಲೆ ಏರಿಕೆ ವಿರೋಧಿಸಿ, ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ತಾಲ್ಲೂಕು ಕಾಂಗ್ರೆಸ್ ಘಟಕದಿಂದ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

ಇಂತಹ ಸಮಯದಲ್ಲಿ ಜನರಲ್ಲಿ ಧೈರ್ಯ ತುಂಬುವ ಬದಲು, ಅವೈಜ್ಞಾನಿಕ ವಿಚಾರಗಳ ಮೂಲಕ ಸಮಸ್ಯೆಗಳನ್ನು ಸೃಷ್ಟಿಸುವ ಕೆಲಸ ಕೇಂದ್ರ ಸರ್ಕಾರ ಮಾಡುತ್ತಿದೆ. ಪ್ರಸ್ತುತ ಜನರು ವಾಣಿಜ್ಯ ಬಳಕೆಯ ಸಿಲಿಂಡರ್ ಪಡೆಯಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾದ ಪ್ರಧಾನಿಯೇ ಸಂಸತ್ ಅಧಿವೇಶನಕ್ಕೆ ಗೈರು ಹಾಜರಾಗುವ ಮೂಲಕ ಚುನಾವಣಾ ಪ್ರಚಾರಗಳಲ್ಲಿ ಭಾಗವಹಿಸುತ್ತಿದ್ದು ಬಿಜೆಪಿಯವರಿಗೆ ಚುನಾವಣೆಯೇ ಮುಖ್ಯವಾಗಿದೆ ಎಂದರು.

ಮುಖಂಡ ಬಿ.ಎಸ್. ಸುಬ್ರಹ್ಮಣ್ಯ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕೆ ಎದುರಾಗಿರುವ ಸಂಕಟಗಳ ಬಗ್ಗೆ ಅರಿವಿಲ್ಲದಂತೆ ವರ್ತಿಸುತ್ತಿರುವುದು ದೇಶದ ಜನರಿಗೆ ಮಾಡಿದ ಅನ್ಯಾಯ. ಕೇಂದ್ರದ ಸಚಿವ ಪ್ರಲ್ಹಾದ ಜೋಷಿಯವರು ಕಾಂಗ್ರೆಸ್ ಅನ್ನು ಟೀಕಿಸುವ ಕೆಲಸ ಮಾಡುತ್ತಿರುವುದು ಅವರ ಬೇಜವಾಬ್ದಾರಿ ತೋರಿಸುತ್ತದೆ’ ಎಂದರು.

ಕೆಡಿಪಿ ಸದಸ್ಯ ಕೆ.ವಿ. ಸಾಜು ಮಾತನಾಡಿದರು. ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಗೇರುಬೈಲು ನಟರಾಜ್, ಮುಖಂಡರಾದ ಎಸ್.ಡಿ. ರಾಜೇಂದ್ರ, ಬೆನ್ನಿ, ಸುನಿಲ್ ಕುಮಾರ್, ದೇವಂತ್ ಗೌಡ, ಎಂ.ಆರ್. ರವಿಶಂಕರ್, ಅಂಜುಮ್, ಶ್ರೀಧರ್, ಜುಬೇದಾ, ಸೈಯದ್ ವಸೀಂ, ಪ್ರಶಾಂತ್ ಶೆಟ್ಟಿ, ಬೆನ್ನಿ, ನಂದೀಶ್, ರತನ್ ಗೌಡ, ಶಿವಣ್ಣ, ಮಹೇಶ್, ಸುರಯ್ಯಬಾನು, ಮಾಳೂರು ದಿಣ್ಣೆ ರಮೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260319-126-84264825

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.