ನರಸಿಂಹರಾಜಪುರ: ತಾಲ್ಲೂಕಿನ ವ್ಯಾಪ್ತಿಯಲ್ಲಿ ಏಪ್ರಿಲ್ 13ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದ ಸಮೀಪ ಬೆಳಿಗ್ಗೆ 11ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ.

ಪ್ರಮುಖವಾಗಿ ₹38.50 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಹೊನ್ನೆ ಕೂಡಿಗೆ ಸಂಪರ್ಕ ಸೇತುವೆ ಉದ್ಘಾಟಿಸುವರು. ಪಟ್ಟಣದಲ್ಲಿ ₹60 ಕೋಟಿ ವೆಚ್ಚದ ರಸ್ತೆ ವಿಸ್ತರಣೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ,ಶಾಸಕ ಟಿ.ಡಿ.ರಾಜೇಗೌಡ, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಮತ್ತಿತರರು ಭಾಗವಹಿಸುವರು.

ರಸ್ತೆ ಸಂಚಾರ ಮಾರ್ಗ ಬದಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದ ಬಸ್ ನಿಲ್ದಾಣದಿಂದ ಪ್ರವಾಸಿ ಮಂದಿರದವರೆಗೆ ಸೋಮವಾರ ಬೆಳಿಗ್ಗೆಯಿಂದ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-126-2009396307

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.