ನರಸಿಂಹರಾಜಪುರ: ತಾಲ್ಲೂಕು ವ್ಯಾಪ್ತಿಯ ಗ್ರಾಮಗಳಲ್ಲಿರುವ ದಲಿತ ಕಾಲೊನಿಗಳಲ್ಲಿ ಕುಂದು ಕೊರತೆ ಸಭೆ ಆಯೋಜಿಸಬೇಕು ಎಂದು ದಲಿತ ಮುಖಂಡರು ಆಗ್ರಹಿಸಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಭಾನುವಾರ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಗುರದತ್ ಕಾಮಂತ್ ಅವರ ಅಧ್ಯಕ್ಷತೆಯಲ್ಲಿ ದಲಿತರ ಕುಂದು ಕೊರತೆ ಸಭೆ ನಡೆಯಿತು.

ಪೊಲೀಸ್ ಇಲಾಖೆಯಿಂದ ಆಯೋಜಿಸುವ ಕುಂದು ಕೊರತೆ ಸಭೆಯಲ್ಲಿ ಕೇವಲ ಪೊಲೀಸ್ ಇಲಾಖೆಯ ಮುಖ್ಯಸ್ಥರು ಭಾಗವಹಿಸುತ್ತಾರೆ. ಆದರೆ, ತಾಲ್ಲೂಕಿನ ಎಲ್ಲಾ ಇಲಾಖೆಯ ಮುಖ್ಯಸ್ಥರನ್ನೊಳಗೊಂಡಂತೆ ಅಂಬೇಡ್ಕರ್ ಭವನದಲ್ಲಿ ಸಭೆ ಆಯೋಜಿಸಿದರೆ ಬೇರೆ ಬೇರೆ ಇಲಾಖೆಯ ಸಮಸ್ಯೆಗಳನ್ನು ಗಮನ ಸೆಳೆಯಲು ಅನುಕೂಲವಾಗುತ್ತದೆ ಎಂದು ಸಲಹೆ ನೀಡಿದರು.

ಎಲ್ಲ ಇಲಾಖೆಗಳ ಅಧಿಕಾರಿಗಳು ಸಹ ಸಭೆಯಲ್ಲಿ ಭಾಗವಹಿಸಲು ಸೂಚಿಸುವಂತೆ ಜಿಲ್ಲಾಧಿಕಾರಿಗೆ ಪತ್ರ ಬರೆಯಬೇಕು ಎಂದು ಆಗ್ರಹಿಸಿದರು.

ದಲಿತರ ಕುಂದು ಕೊರತೆ ಸಭೆ ಆಯೋಜಿಸುವಾಗ ಸಮುದಾಯದ ಮುಖಂಡರಿಗೆ ಕನಿಷ್ಠ ಒಂದು ವಾರ ಮುಂಚಿತವಾಗಿ ತಿಳಿಸಿದರೆ ಅನುಕೂಲವಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಮೊಕದ್ದಮೆ ದಾಖಲಿಸುವಾಗ ಮಧ್ಯವರ್ತಿಗಳಿಗೆ ಅವಕಾಶ ನೀಡದೆ ಪೂರ್ವಾಪರ ವಿಚಾರಿಸಿದ ನಂತರ, ದೂರು ದಾಖಲಿಸಬೇಕು. ಮನೆ, ಭೂಮಿ ಇಲ್ಲದ ದಲಿತರಿಗೆ ಭೂಮಿ, ಮನೆ ಮಂಜೂರು ಮಾಡುವಂತೆ ತಹಶೀಲ್ದಾರ್ ಅವರಿಗೆ ಸೂಚಿಸಬೇಕು. ಪ.ಪಂ. ವ್ಯಾಪ್ತಿಯಲ್ಲಿ ಚರಂಡಿಯನ್ನು ಸಮರ್ಪಕವಾಗಿ ಸ್ವಚ್ಛಗೊಳಿಸುತ್ತಿಲ್ಲ, ಸ್ವಚ್ಛಗೊಳಿಸುವಂತೆ ಸೂಚಿಸಬೇಕು. ಹೊಸದಾಗಿ ನಿರ್ಮಿಸಿರುವ ಸಿದ್ದರಾಮಯ್ಯ ಸೇತುವೆಯ ಬಳಿ ಮದ್ಯಪಾನ ಮಾಡುತ್ತಿರುವುದು ಕಂಡು ಬಂದಿದ್ದು, ಬಾಟಲಿಗಳ ರಾಶಿ ಬಿದ್ದಿದೆ. ಈ ಸ್ಥಳದಲ್ಲಿ ಮದ್ಯಪಾನ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ದಲಿತ ಮುಖಂಡರು ಹೇಳಿದರು.

ಪಟ್ಟಣದ ಸುಂಕದಕಟ್ಟೆಯ ಸಮೀಪದ ಕೆಲವು ಟಿ ಅಂಗಡಿ ಗಳಲ್ಲಿ ಕುಳಿತು ನಿಂದನಾತ್ಮಕ ವಾಗಿ ಹೀಯಾಳಿಸುವ ಪ್ರವೃತ್ತಿಯನ್ನು ಕೆಲವರು ಮಾಡು ತ್ತಿದ್ದು, ಅಂಥವರನ್ನು ಕರೆದು ತಿಳಿವಳಿಕೆ ನೀಡಬೇಕೆಂದು ಒತ್ತಾಯಿಸಿದರು.

ಸಭೆಯಲ್ಲಿ ಸಬ್ ಇನ್ಸ್ಪೆಕ್ಟರ್ ನೂತನ್, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಡಿ. ರಾಮು, ಮಹಿಳಾ ಘಟಕದ ಅಧ್ಯಕ್ಷೆ ಪವಿತ್ರ ದೇವರಾಜ್, ಮಹಿಳಾ ನಗರ ಘಟಕ ಅಧ್ಯಕ್ಷ ಆಶಾ ಮಧು, ನರಸಿಂಹರಾಜ ನಗರ ಘಟಕ ಅಧ್ಯಕ್ಷ ಪಿಕಪ್ ಚಂದ್ರು, ತಾಲ್ಲೂಕು ವಾಲ್ಮೀಕಿ ಸಂಘದ ಅಧ್ಯಕ್ಷ ಮಂಜುನಾಥ್, ದಲಿತ ಮುಖಂಡರಾದ ಶೆಟ್ಟಿಕೊಪ್ಪ ಪಿ. ಮಂಜುನಾಥ್, ಮೇದರಬೀದಿಯ ಶ್ರೀನಾಥ್, ಮಂಜುನಾಥ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-126-973996389

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.