ನರಸಿಂಹರಾಜಪುರ: ತಹಶೀಲ್ದಾರ್ ನೂರುಲ್ ಹುದಾ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿ ತಂಡ ಪಟ್ಟಣದ ದಿನಸಿ ಅಂಗಡಿಗಳು, ಮೆಡಿಕಲ್ಗಳು ಹಾಗೂ ಫ್ಯಾನ್ಸಿ ಸ್ಟೋರ್ಗಳಿಗೆ ಶುಕ್ರವಾರ ಸಂಜೆ ದಿಢೀರ್ ಭೇಟಿ ನೀಡಿ ಅವಧಿ ಮೀರಿದ ಆಹಾರ, ಪಾನೀಯ, ಚಾಕಲೇಟ್ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡು ಅಂಗಡಿಯವರಿಗೆ ಎಚ್ಚರಿಕೆ ನೀಡಿದರು.

ತಹಶೀಲ್ದಾರ್ ಮಾತನಾಡಿ, ಶಾಲಾ ಕಾಲೇಜು ಆವರಣದ ಅಂಗಡಿಗಳಲ್ಲಿ ಅವಧಿ ಮೀರಿದ ತಿನಿಸು ಮಾರಾಟ ಮಾಡಿದರೆ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಈ ಬಗ್ಗೆ ದೂರುಗಳು ಬಂದಿದ್ದವು. ಅವಧಿ ಮೀರಿದ ಯಾವುದೇ ವಸ್ತುಗಳ ಮಾರಾಟ ಮಾಡುವುದು ಸರಿಯಲ್ಲ. ಗ್ರಾಹಕರು ಖರೀದಿ ಸಂದರ್ಭದಲ್ಲಿ ಉತ್ಪಾದನೆ ಮತ್ತು ಅವಧಿ ಮುಗಿಯುವ ದಿನಾಂಕ ಪರಿಶೀಲಿಸಬೇಕು ಎಂದರು.

ಇದು ಮೊದಲ ಹಂತದ ಕಾರ್ಯಾಚರಣೆ. ಅವಧಿ ಮೀರಿದ ವಸ್ತುಗಳನ್ನು ಮತ್ತೆ ಮಾರಾಟ ಮಾಡುವುದು ಕಂಡು ಬಂದರೆ ಅಂಗಡಿಯ ಮಾಲೀಕರಿಗೆ ನೋಟಿಸ್ ನೀಡಲಾಗುವುದು. ದಂಡ ವಿಧಿಸಿ ಪರವಾನಗಿ ರದ್ದುಗೊಳಿಸುವ ಸಾಧ್ಯತೆಯೂ ಇದೆ ಎಂದು ಅವರು ತಿಳಿಸಿದರು.

ಕೊಪ್ಪ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕ ಜೀವನ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಧರ್ಮರಾಜ್, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸೇವಾ ನಾಯ್ಕ, ಆಹಾರ ಇಲಾಖೆಯ ಗಣಪತಿ, ಸಮಾಜ ಕಲ್ಯಾಣ ಇಲಾಖೆಯ ಎ.ಕೆ ಪಾಟೀಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾವ್ಯಶ್ರೀ, ಗ್ರಾಮ ಲೆಕ್ಕಾಧಿಕಾರಿ ಸಾನಿಯಾ ತಾಜ್, ಸ್ವಯಂ ಸೇವಕಿ ಸಿಸಿಲಿಯಾನಂದ ಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260307-126-2121208537

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.