ನರಸಿಂಹರಾಜಪುರ: ತಾಲ್ಲೂಕಿನ ವ್ಯಾಪ್ತಿಯಲ್ಲಿ ಭಾನುವಾರ ಮಧ್ಯಾಹ್ನದ ಬಳಿಕ ಗುಡುಗು ಸಹಿತ ಭಾರಿ ಮಳೆಯಾಗಿದೆ.

ಎರಡು ಮೂರು ದಿನಗಳಿಂದ ಮೋಡಕವಿದ ವಾತಾವರಣ ಇದ್ದರೂ ಮಳೆ ಬಂದಿರಲಿಲ್ಲ. ಶನಿವಾರ ರಾತ್ರಿ ತುಂತುರು ಮಳೆಯಾಗಿತ್ತು. ಭಾನುವಾರ ಮಧ್ಯಾಹ್ನ ಸುಮಾರು 2ಗಂಟೆಗಳ ಕಾಲ ಮಳೆ ಸುರಿಯಿತು.

ಮೂಡುಬಿದಿರೆ: ‘ಅಪಘಾತ ವಲಯ’ ಎಂದು ಗುರುತಿಸಿಕೊಂಡಿರುವ ಮೂಡುಬಿದಿರೆ– ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದಲ್ಲಿ ಸರ್ವಿಸ್ ರಸ್ತೆ ನಿರ್ಮಿಸಬೇಕೆಂದು ಆಗ್ರಹಿಸಿ ಸರ್ಕಾರದ ಮೇಲೆ ಒತ್ತಡ ಹೇರಲು ಸ್ಥಳೀಯರು ಭಾನುವಾರ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆ ರದ್ದುಗೊಂಡಿದೆ.

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ಡಿಬಿಎಲ್ ಕಂಪನಿ, ಜನಪ್ರತಿನಿಧಿಗಳು ಬನ್ನಡ್ಕದಲ್ಲಿ ಸರ್ವಿಸ್ ರಸ್ತೆ ನಿರ್ಮಿಸುವ ಭರವಸೆ ನೀಡಿದ ಕಾರಣ ಗ್ರಾಮಸ್ಥರು ಪ್ರತಿಭಟನೆಯ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಬೆಳ್ತಂಗಡಿ: ತಾಲ್ಲೂಕಿನ ಕುತ್ಲೂರು ಗ್ರಾಮದ ನಿವಾಸಿ, ಅನಾರೋಗ್ಯದಿಂದ ಬಳಲುತ್ತಿರುವ ಭಾರತಿ ಶೆಟ್ಟಿ ಅವರಿಗೆ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ವತಿಯಿಂದ ಆರ್ಥಿಕ ನೆರವು ನೀಡಲಾಯಿತು.

ಮಾತೃ ಸಂಘದ ತಾಲ್ಲೂಕು ಕಾರ್ಯಕಾರಿ ಸಮಿತಿ ಸದಸ್ಯೆ ಸುಜಾತ ಶೆಟ್ಟಿ ಪೆರಿಂಜೆ ಅವರು ಭಾರತಿ ಶೆಟ್ಟಿ ಅವರ ಮನೆಗೆ ತೆರಳಿ ಸಹಾಯ ನಿಧಿ ವಿತರಿಸಿ ಸಾಂತ್ವನ ಹೇಳಿದರು. ವಲಯದ ಹಾಗೂ ಗ್ರಾಮ ಸಮಿತಿ ಪದಾಧಿಕಾರಿಗಳಾದ ರಾಜು ಶೆಟ್ಟಿ, ರವಿ ಶೆಟ್ಟಿ, ಪ್ರದೀಪ್ ಶೆಟ್ಟಿ, ಕಿರಣ್ ಶೆಟ್ಟಿ, ರಾಜೇಶ್ ಶೆಟ್ಟಿ, ವಿಶ್ವನಾಥ ಶೆಟ್ಟಿ, ಶಿವಣ್ಣ ಶೆಟ್ಟಿ ಜತೆಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-126-1577745206

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.