ನರಸಿಂಹರಾಜಪುರ: ತಾಲ್ಲೂಕಿನ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ 165 ಕಾಮಗಾರಿಗಳಲ್ಲಿ 89 ಕಾಮಗಾರಿಗಳು ಪೂರ್ಣಗೊಂಡು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಗಿದೆ. 76 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಎಂಜಿನಿಯರ್ ಸುನಿಲ್ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಆಡಳಿತಾ ಧಿಕಾರಿ ಕೊಪ್ಪ ಉಪವಲಯ ಅರಣ್ಯ ಸಂರಕ್ಷಣಾಧಿಕಾರಿ ಇ.ಶಿವಶಂಕರ್ ಅಧ್ಯ ಕ್ಷತೆಯಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂ ಗಣದಲ್ಲಿ ನಡೆದ ತಾ.ಪಂ. ಸಾಮಾನ್ಯ ಸಭೆಯಲ್ಲಿ ಅವರು ಮಾಹಿತಿ ನೀಡಿದರು.

ತಾಲ್ಲೂಕಿನ ಕುಡಿಯುವ ನೀರಿನ ಸಮಸ್ಯೆ ಸರಿಪಡಿಸಲು ₹10 ಲಕ್ಷ ಅನುದಾನ ಬಂದಿದೆ. ಕೊಳವೆ ಬಾವಿಗಳ ನೀರನ್ನೆ ಅವಲಂಬಿಸಿರುವುದರಿಂದ ಸಮಸ್ಯೆಯಾಗಿದೆ. ನೀರು ಸರಬರಾಜು ಆಗುತ್ತಿರುವುದನ್ನು ಖಾತರಿ ಪಡಿಸಿಕೊಂಡ ನಂತರವೇ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಬೇಕು ಎಂದು ಅಧ್ಯಕ್ಷರು ಸೂಚಿಸಿದರು.

ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ.ಮಹೇಂದ್ರ ಕಿರೀಟಿ, ‘ತಾಲ್ಲೂಕು ವ್ಯಾಪ್ತಿಯಲ್ಲಿ 52 ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿದ್ದವು. ಎಲ್ಲರೂ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಗರ್ಭಕಂಠ ಕ್ಯಾನ್ಸರ್ ತಡೆಯಲು 15 ವರ್ಷ ವಯಸ್ಸಿನೊಳಗಿನ ಹೆಣ್ಣು ಮಕ್ಕಳಿಗೆ ಚುಚ್ಚುಮದ್ದು ನೀಡಲಾಗುತ್ತಿದೆ. ಕೆಲವರು ಈ ಚುಚ್ಚುಮದ್ದು ಬಗ್ಗೆ ಅಪಪ್ರಚಾರ ಮಾಡಿದ್ದರು. ವೈಯಕ್ತಿಕವಾಗಿ ಜಾಗೃತಿ ಮೂಡಿಸಿದ ಮೇಲೆ ಪೋಷಕರು ಹೆಣ್ಣು ಮಕ್ಕಳಿಗೆ ಚುಚ್ಚುಮದ್ದು ಕೊಡಿಸುತ್ತಿದ್ದಾರೆ’ ಎಂದರು.

ಆಯುಷ್ಮಾನ್ ಯೋಜನೆಯಡಿ ಕಟ್ಟಡ ನಿರ್ಮಾಣಕ್ಕೆ ಕೆ. ಕಣಬೂರಿಗೆ ₹65 ಲಕ್ಷ ಮಂಜೂರಾಗಿದ್ದು, ಜಾಗದ ಸಮಸ್ಯೆ ಇದೆ. ಎಲ್ಲೆಲ್ಲಿ ಜಾಗದ ಅವಶ್ಯಕತೆಯಿದೆ ಎಂಬ ಬಗ್ಗೆ ಪಟ್ಟಿ ನೀಡಿದರೆ ಅರಣ್ಯ ಇಲಾಖೆಯಿಂದ ವ್ಯವಸ್ಥೆ ಮಾಡಲಾಗುವುದು ಎಂದು ಇ. ಶಿವಶಂಕರ್ ಭರವಸೆ ನೀಡಿದರು.

ಮೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗೌತಮ್, ‘ತಾಲ್ಲೂಕಿನ 14 ಗ್ರಾಮ ಪಂಚಾಯಿತಿಗಳಿಂದ ಕುಡಿಯುವ ನೀರು ಸರಬರಾಜು, ಬೀದಿ ದೀಪದ ವಿದ್ಯುತ್ ಬಿಲ್ ಬಾಕಿ ₹6 ಕೋಟಿಗೂ ಅಧಿಕವಿದೆ. ಬಿ. ಕಣಬೂರು ಗ್ರಾಮ ಪಂಚಾಯಿತಿಯ ವಿದ್ಯುತ್ ಬಾಕಿ ₹1.50 ಕೋಟಿ ಇದೆ’ ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ. ನವೀನ್ಕುಮಾರ್ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊಳವೆ ಬಾವಿ ಮೇಲಿನ ಅವಲಂಬನೆ ಹೆಚ್ಚಾಗಿದೆ. ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿ ಒಂದರಲ್ಲೇ 90 ಕೊಳವೆ ಬಾವಿಗಳಿವೆ ಎಂದು ತಿಳಿಸಿದರು.

ಗ್ರಾಮಗಳಲ್ಲಿ 20 ವರ್ಷಗಳಿಂದ ಸರ್ಕಾರಿ ಶಾಲೆಗಳಿಗೆ ಹಕ್ಕು ಪತ್ರ ಮಾಡಿಸಿಕೊಳ್ಳಬೇಕು ಎಂದು ಸರ್ಕಾರದಿಂದ ಆದೇಶ ಬಂದಿದೆ ಎಂದು ಕ್ಷೇತ್ರ ಶಿಕ್ಷಣಾಧಿ ಕಾರಿ ಶಬಾನಾ ಅಂಜುಮ್ ಮಾಹಿತಿ ನೀಡಿದರು. ಶಿಥಿಲಾವಸ್ಥೆಗೆ ತಲುಪಿರುವ ಶಾಲೆಗಳ ಬಗ್ಗೆ ಮಾಹಿತಿ ನೀಡಿದರೆ ದುರಸ್ತಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ನವೀನ್ಕುಮಾರ್ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಇ. ಶಿವಶಂಕರ್ ಮಾತನಾಡಿ, ತಾಲ್ಲೂಕಿನಲ್ಲಿ ಎಷ್ಟು ಶಾಲೆಗಳು ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿವೆ ಎಂಬ ಮಾಹಿತಿ ನೀಡಿ. ಗ್ರಾಮಗಳಲ್ಲಿ ಯಾವುದೇ ಒಂದು ಕುಟುಂಬಕ್ಕೆ ಅರಣ್ಯ ಹಕ್ಕು ಕಾಯ್ದೆಯಡಿ ಹಕ್ಕು ಪತ್ರ ವಿತರಣೆಯಾಗಿದ್ದರೆ ಸಾಕು ಪಹಣಿ ಮಾಡಿಸಿಕೊ ಳ್ಳಲು ಅವಕಾಶವಿದೆ ಎಂದರು.

ಕೃಷಿ ಇಲಾಖೆಯ ಸಹಾಯಕ ನಿರ್ದೇ ಶಕ ಮಹೇಶ್, ‘ಯೂರಿಯಾ ಮತ್ತು ಡಿಎಪಿ ರಸಗೊಬ್ಬರದ ಕೊರತೆಯಿದೆ. 17 ಸಾವಿರ ಹೆಕ್ಟೇರ್ ಖಾತೆ ಇರುವ ಜಮೀ ನಿದೆ. ಒತ್ತುವರಿ ಜಮೀನು ಹೆಚ್ಚಾಗಿದೆ. ರಸಗೊಬ್ಬರದ ಕೊರತೆ ನೀಗಿಸಲು ಖಾತೆ ಇರುವ ರೈತರಿಗೆ ಮಾತ್ರ ಎಫ್ಐಡಿ ಮೂಲಕ ರಸಗೊಬ್ಬರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಟಿಪಿಒ ಯಾದವರಾಜ್, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕಿ (ಪ್ರಭಾರ) ಮಂಜುಳಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-126-916177431

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.