ನರಸಿಂಹರಾಜಪುರ: ಕನ್ನಡದ ಕೆಲಸದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ತಹಶೀಲ್ದಾರ್ ನೂರುಲ್ ಹುದಾ ಹೇಳಿದರು.

ಕಡೂರಿನಲ್ಲಿ ಏ.10ರಿಂದ 12ರವರೆಗೆ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲೆಯಾದ್ಯಂತ ಸಂಚರಿಸುವ ರಥ ಬುಧವಾರ ಪಟ್ಟಣಕ್ಕೆ ಭೇಟಿ ನೀಡಿದ ವೇಳೆ ಅವರು ಮಾತನಾಡಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಎಚ್. ಪೂರ್ಣೇಶ್ ಮಾತನಾಡಿ, ಸಾಹಿತ್ಯ ರಥದ ಜವಾಬ್ದಾರಿಯನ್ನು ಜಿಲ್ಲೆಯಾದ್ಯಂತ ಮಹಿಳಾ ಘಟಕಕ್ಕೆ ನೀಡಿದ್ದು ಮಹಿಳೆಯರು ಸಾಹಿತ್ಯ ಸಮ್ಮೇಳನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಮ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯ ನಂಜುಂಡಸ್ವಾಮಿ ಮಾತನಾಡಿದರು.

ಜುಬೇದಾ, ಶಶಿಕಲಾ, ಸವಿತಾ, ಕನ್ನಡ ಸಾಹಿತ್ಯ ಪರಿಷತ್ ತರೀಕೆರೆ ಮಹಿಳಾ ಘಟಕದ ಅಧ್ಯಕ್ಷೆ ಸುನೀತಾ, ಕಡೂರಿನ ಲತಾ ರಾಜಶೇಖರ್, ಪದ್ಮಾ ಸೂರಿಶ್ರೀನಿವಾಸ್, ಎಸ್.ಎಸ್.ಸಂತೋಷ್ ಕುಮಾರ್, ಇಮ್ರಾನ್ ಅಹಮ್ಮದ್ ಬೇಗ್, ಶಾಶ್ವತಿ ಮಹಿಳಾ ಒಕ್ಕಲಿಗರ ಸಂಘದ ಶ್ಯಾಮಲಾ ಸತೀಶ್, ಚೈತ್ರಾ ರಮೇಶ್, ಶೀಲಾ ಸುಂದರೇಶ್, ಜಾನಪದ ಪರಿಷತ್ ನ ಜಯಂತಿ ಇದ್ದರು. ಸಾಹಿತ್ಯ ರಥದ ಧ್ವಜವನ್ನು ಹಸ್ತಾಂತರಿಸಲಾಯಿತು. ಸಮ್ಮೇಳನಾಧ್ಯಕ್ಷೆ ಜಯಮ್ಮ ಅವರಿಗೆ ಆಹ್ವಾನ ಪತ್ರಿಕೆ ನೀಡಲಾಯಿತು. ಜಯಂತಿ ಮತ್ತು ತಂಡದವರು ಕನ್ನಡ ಗೀತೆ ಹಾಡಿದರು. ಭುವನೇಶ್ವರಿ ದೇವಿಗೆ ಆರತಿ ಎತ್ತಿ ಪುಷ್ಪಾರ್ಚನೆ ಮಾಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-126-1411199053

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.