ನರಸಿಂಹರಾಜಪುರ: ಕನ್ನಡ ಸಾಹಿತ್ಯ ಪರಿಷತ್ನಿಂದ ಕನ್ನಡ ಶಾಲೆಗಳನ್ನು ಉಳಿಸುವ ಕೆಲಸವಾಗಬೇಕಾಗಿದೆ ಎಂದು ತಾಲ್ಲೂಕು ಮಟ್ಟದ 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಬೆಮ್ಮನೆ ದಯಾನಂದ್ ಅಭಿಪ್ರಾಯಪಟ್ಟರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿರುವ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಕನ್ನಡ ಸಾಹಿತ್ಯ ಪರಿಷತ್ 112ನೇ ಸಂಸ್ಥಾಪನಾ ದಿನಾಚರಣೆಯಲ್ಲಿ, ಕನ್ನಡ ಸಾಹಿತ್ಯ ಪರಿಷತ್ತು ಉದಯ ಮತ್ತು ಉದ್ದೇಶ, ನಡೆದು ಬಂದ ಹಾದಿಯ ಬಗ್ಗೆ ಅವರು ಉಪನ್ಯಾಸ ನೀಡಿದರು.

‘ಕನ್ನಡ ನಾಡಿನ ಏಕೈಕ ಸ್ವಾಯತ್ತ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತು. ಪ್ರತಿವರ್ಷ ರಾಜ್ಯ ಸಮ್ಮೇಳನ, ಜಿಲ್ಲಾ ಸಮ್ಮೇಳನ ಹಾಗೂ ತಾಲ್ಲೂಕು ಸಮ್ಮೇಳನಗಳನ್ನ ನಡೆಸಲಾಗುತ್ತದೆ. ಹೋಬಳಿ ಘಟಕಗಳನ್ನು ಸ್ಥಾಪಿಸಿ, ಪರಿಷತ್ತಿನ ಕಾರ್ಯಕ್ರಮ ನಡೆಸುತ್ತಾ ಬರಲಾಗಿದೆ. ಸಮ್ಮೇಳನದ ಮೂಲಕ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿಗಳ ಪರಿಚಯ ಮಾಡಿಕೊಡಬೇಕು. ಕನ್ನಡ ಭಾಷೆಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ಪೂರ್ಣಾಂಕ ಪಡೆದು ಉತ್ತೀರ್ಣರಾಗುವಂತೆ ಮಾಡಬೇಕು’ ಎಂದರು.

ನರಸಿಂಹರಾಜಪುರ ತಾಲ್ಲೂಕಿನಲ್ಲಿ ಕನ್ನಡ ಭವನದ ಕೊರತೆ ಇದ್ದು, ಇದನ್ನು ಒದಗಿಸಲು ಸರ್ಕಾರ ಗಮನಹರಿಸಬೇಕು. ಕನ್ನಡದ ಕೆಲಸಗಳನ್ನಸ್ವಯಂ ಪ್ರೇರಿತರಾಗಿ ಮಾಡಬೇಕು. ಕನ್ನಡದ ಕೆಲಸಗಳಿಗೆ ಸರ್ಕಾರ ಹಣವನ್ನು ನಿಗದಿ ಮಾಡಬೇಕು ಎಂದು ಅವರು ಹೇಳಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯ ನಂಜುಂಡಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ‘ಸರ್ ಎಂ. ವಿಶ್ವೇಶ್ವರಯ್ಯ, ಮಿರ್ಜಾ ಇಸ್ಮಾಯಿಲ್ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರು ಕರ್ನಾಟಕ ಸಾಹಿತ್ಯ ಪರಿಷತ್ತು ಎಂಬುದನ್ನ ಸ್ಥಾಪಿಸಿದರು. ನಂತರ, ಕನ್ನಡ ಸಾಹಿತ್ಯ ಪರಿಷತ್ತು ಎಂದು ನಾಮಕರಣ ಮಾಡಿ ಪ್ರಸ್ತುತ 112 ವರ್ಷಗಳು ಕಳೆದಿವೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎಚ್. ಪೂರ್ಣೇಶ್ ಮಾತನಾಡಿ, ಯಾವುದೇ ಸಂಸ್ಥೆಯನ್ನ ಕಟ್ಟಲು ಸಂಘಟನಾ ಮನೋಭಾವ, ಕ್ರಿಯಾಶೀಲತೆ ಹಾಗೂ ಬದ್ಧತೆ ಇರಬೇಕು. ಮುಂದಿನ ದಿನಗಳಲ್ಲಿ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಪೂರ್ಣಾಂಕ ಪಡೆದ ವಿದ್ಯಾರ್ಥಿಗಳನ್ನು ಒಂದೇ ವೇದಿಕೆಯಲ್ಲಿ ಸನ್ಮಾನಿಸಲಾಗುತ್ತದೆ ಎಂದರು.

ಕಾರ್ಯಕ್ರಮಕ್ಕೆ 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಸಾಹಿತಿ ಎಂ.ಜಯಮ್ಮ ಚಾಲನೆ ನೀಡಿದರು.

ಸುಷ್ಮಾ ಯುಗಂಧರ್, ಅಪೂರ್ವ ರಾಘು, ಹಿರೇನಲ್ಲೂರು ಶ್ರೀನಿವಾಸ್, ರೋಟರಿ ಸಂಸ್ಥೆಯ ನಿಯೋಜಿತ ಅಧ್ಯಕ್ಷ ವಿದ್ಯಾನಂದ್ ಕುಮಾರ್, ಜೆಸಿಐ ಸಂಸ್ಥೆಯ ಮಿಥುನ್ ಗೌಡ, ತಕ್ಷಕ್ ಕುಮಾರ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ನ ಹಿರಿಯ ಸದಸ್ಯ ಪಿ.ಸಿ. ಮ್ಯಾಥ್ಯೂ, ಯುಗಾಂದರ್, ಸುಪ್ರೀತಾ ಶ್ರೀನಿವಾಸ್, ಹರಿಪ್ರಿಯ ಇದ್ದರು.

ಹಿರೇನಲ್ಲೂರು ಶ್ರೀನಿವಾಸ್ ಹಾಗೂ ಸುಷ್ಮಾ ಯುಗಂಧರ್ ನಾಡಗೀತೆ, ಕನ್ನಡ ಗೀತೆಗಳನ್ನು ಹಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-126-403951950

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.