ನರಸಿಂಹರಾಜಪುರ: ಸಂಕಷ್ಟದಲ್ಲಿದ್ದ ಬೀದಿ ಬದಿ ವ್ಯಾಪಾರಿಗಳಿಗೆ ಸ್ವನಿಧಿ ಯೋಜನೆಯನ್ನು ಸಮರ್ಪಕವಾಗಿ ತಲುಪಿಸುವಲ್ಲಿ ಸಮುದಾಯ ಸಂಘಟನಾ ಅಧಿಕಾರಿ ಲಕ್ಷ್ಮೇಗೌಡ ಅವರ ಪಾತ್ರ ಅನನ್ಯವಾದುದು ಎಂದು ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಗುರುಮೂರ್ತಿ ಅಭಿಪ್ರಾಯಪಟ್ಟರು.

ಪಟ್ಟಣ ಪಂಚಾಯಿತಿಯಲ್ಲಿ ಸಮುದಾಯ ಸಂಘಟಕರಾಗಿ ಸೇವೆ ಸಲ್ಲಿಸಿ ಗುರುವಾರ ನಿವೃತ್ತರಾದ ಲಕ್ಷ್ಮೇಗೌಡ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಪಿಎಂ ಸ್ವನಿಧಿ ಯೋಜನೆಯಡಿ ಪಟ್ಟಣದ ಬೀದಿ ಬದಿಯಲ್ಲಿ ವ್ಯಾಪಾರ ಮಾಡುವ 128 ಜನರಿಗೆ ₹10 ಸಾವಿರ, ₹20 ಸಾವಿರ ಮತ್ತು ₹50 ಸಾವಿರ ಸಾಲ ಸೌಲಭ್ಯವನ್ನು ಕೊಡಿಸಿದ್ದರು. ಸಣ್ಣ, ವ್ಯಾಪಾರಿಗಳನ್ನು ಗುರುತಿಸಿ ಸಹಾಯಧನ ಕೊಡಿಸಿದ್ದರು. ಸರ್ಕಾರದ ಅಧಿಕಾರಿಯಾಗಿದ್ದು, ಸಮಾಜದ ಕೆಳಸ್ತರದ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ಸಮಾಜದ ಕೆಲಸ ಉತ್ತಮವಾಗಿ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಕೊಪ್ಪ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕುರಿಯಾಕೋಸ್ ಮಾತನಾಡಿ, ಲಕ್ಷ್ಮೇಗೌಡ ಅವರು ಪಟ್ಟಣದ ವ್ಯಾಪ್ತಿಯಲ್ಲಿ ಮಹಿಳೆಯರನ್ನು ಒಟ್ಟುಗೂಡಿಸಿ ಸ್ವಸಹಾಯ ಸಂಘಗಳನ್ನು ಸ್ಥಾಪಿಸಿ ಅವರಿಗೆ ಸರ್ಕಾರ ಸೌಲಭ್ಯಗಳನ್ನು ತಲುಪಿಸಿ ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರನ್ನಾಗಿಸುವ ಕೆಲಸವನ್ನು ಉತ್ತಮವಾಗಿ ನಿರ್ವಹಿಸಿದ್ದಾರೆ ಎಂದರು.

ಸನ್ಮಾನ ಸ್ವೀಕರಿಸಿದ ನಿವೃತ್ತ ಸಮುದಾಯ ಸಂಘಟಕ ಲಕ್ಷ್ಮೇಗೌಡ ಮಾತನಾಡಿ, ಸೇವಾ ಅವಧಿಯಲ್ಲಿ ಪಟ್ಟಣ ಪಂಚಾಯಿತಿಯ ಶೇ 24.10, ಶೇ 7.5, ಶೇ 5 ಅನುದಾನವನ್ನು ಸರ್ಕಾರದ ಆದೇಶದಂತೆ, ಜನಪ್ರತಿನಿಧಿಗಳ ಸೂಚನೆಯಂತೆ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಲಾಗಿದೆ. ಸೇವಾ ಅವಧಿಯಲ್ಲಿ ಉತ್ತಮ ಸೇವೆ ಸಲ್ಲಿಸಲು ಪಟ್ಟಣ ಪಂಚಾಯಿತಿ ಸಿಬ್ಬಂದಿ ಉತ್ತಮ ಸಹಕಾರ ನೀಡಿದ್ದಾರೆ ಎಂದು ಸ್ಮರಿಸಿದರು.

ಅಧ್ಯಕ್ಷತೆ ವಹಿಸಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್ ಮಾತನಾಡಿದರು.

ಪ.ಪಂ. ಮಾಜಿ ಸದಸ್ಯ ಮುಕುಂದ, ಪ.ಪಂ. ಮಾಜಿ ಅಧ್ಯಕ್ಷೆ ಜುಬೇದಾ, ಮಾಜಿ ಸದಸ್ಯ ಸೈಯದ್ ವಸೀಂ, ಮಹಿಳಾ ಒಕ್ಕೂಟದ ಬಾನುಮತಿ, ಶೈನಿ, ಎಂಜಿನಿ ಯರ್ ಅಶ್ವಿನಿ, ಲೆಕ್ಕಾಧಿಕಾರಿ ಉಷಾ ಮಾತನಾಡಿದರು. ಪೌರಕಾರ್ಮಿಕ ಸಂಘದ ಅಧ್ಯಕ್ಷ ಸುರೇಶ್, ಮಾಜಿ ಸದಸ್ಯ ರಾದ ಶೋಜಾ, ಆರ್.ಕುಮಾರಸ್ವಾಮಿ, ಲಕ್ಷ್ಮೇಗೌಡರ ಪತ್ನಿ ಧನಲಕ್ಷ್ಮಿ, ಸಿಬ್ಬಂದಿ ಶೃತಿ, ಚಂದ್ರಶೇಖರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-126-1447990696

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.