ನರಸಿಂಹರಾಜಪುರ: ತಾಲ್ಲೂಕಿನ ಕಣಿವೆ ಗ್ರಾಮದ ಸೂರುಗುಡಿಗೆಯ ದೇವಸ್ಥಾನದ ಸಮೀಪದ ಪೊದೆಯಲ್ಲಿ ನವಜಾತ ಹೆಣ್ಣು ಶಿಶು ಮಂಗಳವಾರ ಪತ್ತೆಯಾಗಿದ್ದ ಪ್ರಕರಣ ತಿರುವು ಪಡೆದುಕೊಂಡಿದೆ. ಮಗುವಿನ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಯುವಕ ಮದುವೆ ಆಗುವುದಾಗಿ ನಂಬಿಸಿ ಮೋಸ ಮಾಡಿದ್ದರಿಂದ ಮಗು ಜನಿಸಿದೆ ಎಂದು ತಿಳಿಸಿದ್ದಾರೆ.

‘ತೀರ್ಥಹಳ್ಳಿಯ ಕನ್ನಂಗಿ ನಿವಾಸಿ ಯುವಕ ಮದುವೆಯಾಗುವುದಾಗಿ ಮನೆಯವರಿಗೂ ಕೇಳಿದ್ದ. ಎಲ್ಲರೂ ಒಪ್ಪಿದ ನಂತರ ಸಲುಗೆಯಿಂದ ಇದ್ದೆವು. ಆಗಾಗ ಬರುತ್ತಿದ್ದ ಆತನೊಂದಿಗೆ ದೈಹಿಕ ಸಂಪರ್ಕ ಬೆಳೆದಿತ್ತು. ನಂತರ ಈ ಬಗ್ಗೆ ಹೇಳಿದರೆ ಆತ ತಲೆ ಕೆಡಿಸಿಕೊಳ್ಳದೆ ಉಡಾಫೆಯಿಂದ ವರ್ತಿಸುತ್ತಿದ್ದ. ಮೇ 18ರಂದು ಸಂಜೆ ಹೊಟ್ಟೆ ನೋವು ಕಾಣಿಸಿಕೊಂಡಿತು. ನಂತರ ಮಗು ಜನಿಸಿದಾಗ ಮರ್ಯಾದೆಗೆ ಅಂಜಿ ದೇವಸ್ಥಾನದ ಬಳಿ ಬುಟ್ಟಿಯಲ್ಲಿ ಇರಿಸಿ ಬಂದೆವು’ ಎಂದು ದೂರಿನಲ್ಲಿ ಮಗುವಿನ ತಾಯಿ ತಿಳಿಸಿದ್ದಾರೆ.

ನಂಬಿಸಿ ಮೋಸ ಮಾಡಿರುವ ಯುವಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಮಂಗಳವಾರ ಬೆಳಿಗ್ಗೆ ಮಗು ರಕ್ಷಣೆ ಮಾಡಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಮಗು ಪತ್ತೆಯಾಗಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ವೀರಭದ್ರಯ್ಯ ಮಾಜಿಗೌಂಡರ್ ಪೊಲೀಸರು ದೂರು ನೀಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-126-116928645

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.