ನರಸಿಂಹರಾಜಪುರ: ಪಟ್ಟಣ ಪಂಚಾಯಿತಿಯ ಪೌರ ಕಾರ್ಮಿಕರ ಸೇವೆ ಅನನ್ಯವಾದುದು ಎಂದು ಗದ್ದೇಮನೆ ವಿಶ್ವನಾಥ್ ಚಾರಿಟಬಲ್ ಟ್ರಸ್ಟ್ ಮುಖ್ಯಸ್ಥ ಎಂ.ಪಿ.ಸನ್ನಿ ಹೇಳಿದರು.

ಇಲ್ಲಿನ ಪಟ್ಟಣ ಪಂಚಾಯಿತಿ ಆವರಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರಿಗೆ ಗದ್ದೇಮನೆ ವಿಶ್ವನಾಥ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಕಿಟ್ಗಳನ್ನು ವಿತರಿಸಿ ಅವರು ಮಾತನಾಡಿದರು.

‘ಈಗಾಗಲೇ ಟ್ರಸ್ಟ್ ವತಿಯಿಂದ ಅನೇಕ ಸೇವಾಕಾರ್ಯ ಮಾಡಲಾಗಿದೆ. ಆರ್ಥಿಕ ಹಿಂದುಳಿದ ಮಕ್ಕಳಿಗೆ ಶ್ವೇಟರ್, ಪುಸ್ತಕಗಳು, ಲೇಖನ ಸಾಮಾಗ್ರಿಗಳು ಹಾಗೂ ಸಮವಸ್ತ್ರ ವಿತರಿಸಲಾಗಿದೆ. ಪೌರ ಕಾರ್ಮಿಕರ ಸುರಕ್ಷತೆಗಾಗಿ ಸಲಕರಣೆಗಳ ಅವಶ್ಯಕತೆಯಿದೆ. ಆದ್ದರಿಂದ ಅವರ ಸೇವೆ ಮನಗಂಡು ಸ್ವಚ್ಛತಾ ಕಾರ್ಯಕ್ಕೆ ಬೇಕಾದ ಕಿಟ್ ವಿತರಿಸಲಾಗುತ್ತಿದೆ’ ಎಂದರು.

ಮುಖಂಡ ಗದ್ದೇಮನೆ ಸತೀಶ್ ಮಾತನಾಡಿ, ಪೌರ ಕಾರ್ಮಿಕರು ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಾರೆ. ಆದ್ದರಿಂದ ನಮ್ಮ ಚಾರಿಟಬಲ್ ಟ್ರಸ್ಟ್ ವತಿಯಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಕಿಟ್ ವಿತರಿಸಲಾಗುತ್ತಿದೆ. ಪೌರ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆಯೂ ಗಮನಹರಿಸಬೇಕೆಂದು ಸಲಹೆ ನೀಡಿದರು.

ಗದ್ದೇಮನೆ ವಿಶ್ವನಾಥ್ ಫ್ಯಾನ್ಸ್ ಕ್ಲಬ್ ಅಧ್ಯಕ್ಷ ಮುರುಳಿ, ಸದಸ್ಯರಾದ ಎಂ.ಪಿ. ಮನು, ಸಚಿನ್, ರೀನಾಬೆನ್ನಿ, ಅಜಿತ್, ಎಲಿಯಾಸ್, ಸಾಜು, ಪ್ರದೀಪ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-126-2020086877

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.