ನರಸಿಂಹರಾಜಪುರ: ‘ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾಣಿಜ್ಯ ಕಟ್ಟಡ ಮತ್ತು ಮನೆಗಳಿಗೆ ಆಸ್ತಿ ತೆರಿಗೆ ಪಾವತಿಸಲು ಶೇ 5 ರಿಯಾಯಿತಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದ್ದು, ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಎಲ್ಲ ಕಟ್ಟಡ ಮಾಲೀಕರು ಆಸ್ತಿಗಳ ತೆರಿಗೆ ಪಾವತಿಸಬೇಕು’ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆರ್.ವಿ. ಮಂಜುನಾಥ್ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಲ್ಲಿ ನೀರು ಸಂಪರ್ಕ ಹೊಂದಿರುವ ಮನೆ ಮಾಲೀಕರು ಬಾಕಿ ಉಳಿಸಿರುವ ನೀರಿನ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಬೇಕು. ಇಲ್ಲದಿದ್ದಲ್ಲಿ ನಲ್ಲಿ ಸಂಪರ್ಕ ಕಡಿತಗೊಳಿಸಲಾಗುವುದು. ಪಟ್ಟಣದ ವ್ಯಾಪ್ತಿಯಲ್ಲಿ ಉದ್ದಿಮೆ ನಡೆಸುತ್ತಿರುವ ಮಾಲೀಕರು, ಉದ್ದಿಮೆ ಪರವಾನಗಿಯನ್ನು ಮೇ 15ರೊಳಗೆ ಪಡೆದು ವ್ಯಾಪಾರ ವಹಿವಾಟು ನಡೆಸಬೇಕೆಂದು ಮನವಿ ಮಾಡಿದ್ದಾರೆ.

ಪಟ್ಟಣ ಪಂಚಾಯಿತಿಗೆ ಸೇರಿದ ಮಳಿಗೆಗಳಲ್ಲಿರುವ ಬಾಡಿಗೆದಾರರು, ಬಾಕಿ ಉಳಿಸಿಕೊಂಡಿರುವ ಬಾಡಿಗೆಯನ್ನು ಒಂದುವಾರದೊಳಗೆ ಪಾವತಿಸಬೇಕು. ಬಾಡಿಗೆ ಪಾವತಿಸದ ಮಳಿಗೆಗಳಿಗೆ ಬೀಗ ಹಾಕಿ, ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-126-299293108

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.