ನರಸಿಂಹರಾಜಪುರ: ತಾಲ್ಲೂಕು ಕಚೇರಿಯ ನೌಕರರು, ಸಿಬ್ಬಂದಿ ಮಂಗಳವಾರ ಶ್ರಮದಾನದ ಮೂಲಕ ಕಚೇರಿ ಆವರಣವನ್ನು ಸ್ವಚ್ಛಗೊಳಿಸಿ, ವಿವಿಧ ಜಾತಿಯ ಗಿಡಗಳನ್ನು ನೆಟ್ಟರು.

ಶ್ರಮದಾನದಲ್ಲಿ ತಹಶೀಲ್ದಾರ್, ಶಿರಸ್ತೆದಾರ್, ಕಂದಾಯ ನಿರೀಕ್ಷಕ, ಉಪ ತಹಶೀಲ್ದಾರ್ ಹಾಗೂ ಎಲ್ಲಾ ಸಿಬ್ಬಂದಿ ಒಟ್ಟಾಗಿ ತಾಲ್ಲೂಕು ಕಚೇರಿ ಆವರಣದಲ್ಲಿ ಬೆಳೆದಿದ್ದ ಗಿಡಗಳನ್ನು ತೆಗೆದು ಸ್ವಚ್ಛಗೊಳಿಸಿದರು. ಪಟ್ಟಣ ಪಂಚಾಯಿತಿಯ ಪೌರ ಕಾರ್ಮಿಕರು ಬಂದು ತಮ್ಮ ವಾಹನದಲ್ಲಿ ಕಸವನ್ನು ತೆಗೆದುಕೊಂಡು ಹೋದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ನೂರುಲ್ ಹುದಾ ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಿಗ್ಗೆ 7 ಗಂಟೆಯಿಂದ ತಾಲ್ಲೂಕು ಕಚೇರಿಯ ಆವರಣದ ಬೆಳೆದಿದ್ದ ಗಿಡ,ಕಸವನ್ನು ತೆಗೆಯುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಉತ್ತಮ ಆರೋಗ್ಯ ಪರಿಸರ ನಿರ್ಮಾಣ ಮಾಡಬೇಕು ಎನ್ನುವುದೇ ನಮ್ಮ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲೂ ತಾಲ್ಲೂಕಿನ ಎಲ್ಲಾ ಸರ್ಕಾರಿ ಕಚೇರಿ ಆವರಣವನ್ನು ಸ್ವಚ್ಛಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ನಂತರ ಕಚೇರಿ ಆವರಣದಲ್ಲಿ ಹೊಂಗೆ, ಮಾವು, ನೇರಳೆ, ಸಂಪಿಗೆ ಗಿಡಗಳನ್ನು ನೆಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-126-1433673364

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.