ನರಸಿಂಹರಾಜಪುರ: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಕಾಂಗ್ರೆಸ್ ವತಿಯಿಂದ ‘ಕಾಂಗ್ರೆಸ್ ನಡೆ ನಿಮ್ಮ ಮತ ರಕ್ಷಣೆಗೆ’ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಕೆ.ಪಿ. ಅಂಶುಮಂತ್ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗ ಪ್ರತಿ ಬೂತ್ಗೆ ಬಿಎಲ್ಒಗಳನ್ನು ನೇಮಿಸಿದ್ದು, ಕಾಂಗ್ರೆಸ್ ಪಕ್ಷದಿಂದಲೂ ಬಿಎಲ್ಒ–1 ಮತ್ತು ಬಿಎಲ್ಒ–2ಗಳನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಎಸ್ಐಆರ್ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಿ, ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ತಾಲ್ಲೂಕು, ಪಂಚಾಯಿತಿ ಮತ್ತು ಬೂತ್ ಮಟ್ಟದಲ್ಲಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಜೂನ್ 20ರಿಂದ ಜುಲೈ 29ರವರೆಗೆ ಬಿಎಲ್ಒಗಳು ಮನೆಮನೆಗೆ ಭೇಟಿ ನೀಡಲಿದ್ದು, ಮತದಾರರು ಅಗತ್ಯ ದಾಖಲೆಗಳೊಂದಿಗೆ ಸಹಕರಿಸಬೇಕು. ಸಮಗ್ರ ಮಾಹಿತಿ ಇರುವ ಎರಡು ನಮೂನೆಗಳಲ್ಲಿ ಒಂದನ್ನು ಬಿಎಲ್ಒಗಳಿಗೆ ಸಲ್ಲಿಸಿ, ಮತ್ತೊಂದನ್ನು ಮತದಾರರು ತಮ್ಮ ಬಳಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಆಗಸ್ಟ್ನಲ್ಲಿ ಪ್ರಕಟವಾಗುವ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿದ್ದರೆ, ಚುನಾವಣಾ ಆಯೋಗ ನಿಗದಿಪಡಿಸಿರುವ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ನೀಡಿ ಹೆಸರು ಸೇರಿಸಿಕೊಳ್ಳಬಹುದಾಗಿದೆ ಎಂದರು.

ಶ್ರಮಿಕ ಹಾಗೂ ಬಡ ವರ್ಗದವರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಬಿಎಲ್ಒ–2ಗಳು ವಿಶೇಷ ಗಮನ ವಹಿಸಬೇಕು. ಮತದಾರರ ಮನೆಯಲ್ಲಿ ಯಾರಾದರೂ ಒಬ್ಬರು ಇದ್ದು ಅಗತ್ಯ ಮಾಹಿತಿ ನೀಡುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

‘ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟರೆ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುವ ಸಾಧ್ಯತೆ ಇದೆ. ಆದ್ದರಿಂದ ಪ್ರತಿಯೊಬ್ಬ ಅರ್ಹ ಮತದಾರರ ಮತದಾನದ ಹಕ್ಕು ಉಳಿಯಬೇಕು. ಕೆಪಿಸಿಸಿ ಈಗಾಗಲೇ ಶಾಸಕರು ಮತ್ತು ಮುಖಂಡರಿಗೆ ರಾಜ್ಯಮಟ್ಟದಲ್ಲಿ ತರಬೇತಿ ನೀಡಿದ್ದು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಯ ಬಿಎಲ್ಒ–2ಗಳಿಗೆ ಜೂನ್ 2ರಂದು ಚಿಕ್ಕಮಗಳೂರಿನಲ್ಲಿ ತರಬೇತಿ ಆಯೋಜಿಸಲಾಗಿದೆ’ ಎಂದು ಅವರು ತಿಳಿಸಿದರು.

ಮುಖಂಡರಾದ ಎಸ್.ಡಿ. ರಾಜೇಂದ್ರ, ಶ್ರೀಧರ್ ಪಾನಿ, ಸುನಿಲ್ ಕುಮಾರ್, ಸಾಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-126-1869911698

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.