ನರಸಿಂಹರಾಜಪುರ: ಪಟ್ಟಣದ ಅಗ್ರಹಾರ ಸಮೀಪವಿರುವ ಐತಿಹಾಸಿಕ ವೀರಮ್ಮಾಜಿ ಕೆರೆಯ ಅಂಗಳದಲ್ಲಿ ಕಸ ತಂದು ಸುರಿಯಲಾಗುತ್ತಿದೆ. ಸಮೀಪವೇ ನಾಗರಕಟ್ಟೆ, ಹಳೇಪೆಟೆ ಗುತ್ತ್ಯಮ್ಮ ದೇವಸ್ಥಾನವಿದೆ. ಈ ಭಾಗದಲ್ಲಿ ಕಸ ಹಾಕಬಾರದೆಂದು ಪಟ್ಟಣ ಪಂಚಾಯಿತಿಯಿಂದ ಫಲಕ ಅಳವಡಿಸಲಾಗಿದೆ. ಪಟ್ಟಣ ಪಂಚಾಯಿತಿಯ ಕಸದ ವಾಹನಕ್ಕೆ ಕಸ ನೀಡದೆ, ಹಳೆ ಬಟ್ಟೆಗಳು, ಗಾಜು, ಬಾಟಲಿ, ಪ್ಲಾಸ್ಟಿಕ್ ಮುಂತಾದ ಕಸವನ್ನು ಕೆರೆ ವ್ಯಾಪ್ತಿಯಲ್ಲಿ ಸುರಿದು ಹೋಗುತ್ತಿದ್ದಾರೆ. ಕಸ ಕೊಳೆತು ದುರ್ನಾತ ಬೀರುತ್ತಿದ್ದು, ರಸ್ತೆಯಲ್ಲಿ ಸಂಚರಿಸಲಾಗದ ಸ್ಥಿತಿ ನಿರ್ಮಾಣವಾಗಿದೆ. ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಸಿ ಕಸ ಎಸೆಯುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕೆರೆಯ ಆವರಣ ಸ್ವಚ್ಛವಾಗಿರುವಂತೆ ಸಂಬಂಧಪಟ್ಟವರು ಗಮನಹರಿಸಬೇಕು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-126-1770366410

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.