ದಾವಣ(ಎನ್.ಆರ್.ಪುರ): ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಘಟಕದಿಂದ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಶ್ರೀಜಿತ್ ಗೌಡ ದಂಡಿನಮಕ್ಕೆ ಹೇಳಿದರು.

ಬಾಳೆ ಗ್ರಾ.ಪಂ. ವ್ಯಾಪ್ತಿಯ ದಾವಣ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಪರಿಕರ ವಿತರಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಯ ಮಕ್ಕಳಿಗೆ ಮತ್ತು ಪೋಷಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಪೆನ್, ಪುಸ್ತಕ ಮತ್ತು ಪಠ್ಯ ಕಲಿಕೆಗೆ ಪೂರಕವಾಗಿರುವ ಅನೇಕ ಪರಿಕರ ನೀಡಲಾಗಿದೆ ಎಂದರು.

ಗ್ರಾಮದ ಮುಖಂಡ ಶರತ್ ಮಾತನಾಡಿ, ‘ಸದರಿ ಸರ್ಕಾರಿ ಶಾಲೆಗೆ ಹಲವು ವರ್ಷಗಳಿಂದ ಶ್ರೀಜಿತ್ ಅವರು ಸಹಾಯ ಮಾಡಿಕೊಂಡು ಬಂದಿರುತ್ತಾರೆ. ಹಾಗೆ ಈ ವರ್ಷವೂ ಸಹ ಮಕ್ಕಳಿಗೆ ಅನುಕೂಲವಾಗುವಂತೆ ಹಲವು ವಸ್ತುಗಳನ್ನು ತಂದು ಕೊಟ್ಟಿರುತ್ತಾರೆ. ಅವರಿಗೆ ನಮ್ಮ ಶಾಲೆ ಮತ್ತು ಮಕ್ಕಳ ಮೇಲಿರುವ ಪ್ರೀತಿಗೆ ನಾವು ಆಭಾರಿಯಾಗಿರುತ್ತೇವೆ. ಮುಂದೆಯೂ ಸಹ ನಮ್ಮ ಶಾಲೆಗೆ ಅವರ ಸಹಕಾರವಿರಲಿ ಎಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇವೆ’ ಎಂದರು.

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜೇಶ್ ಬೀಳುವ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.