ಕೊಟ್ಟಿಗೆಹಾರ: ಗ್ರಾಮ ಪಂಚಾಯಿತಿಯಿಂದ ಆಯ್ಕೆಯಾದ ಅಡಿಕೆ ಬೆಳೆಗಾರರಿಗೆ ಮತ್ತು ಕಾಳು ಮೆಣಸು ಬೆಳೆಗಾರರಿಗೆ ಉದ್ಯೋಗ ಖಾತರಿ ಯೋಜನೆಯಲ್ಲಿ ಅನುಕೂಲ ಆಗುತ್ತಿದ್ದು, ಭತ್ತದ ಕೃಷಿಕರಿಗೂ ಸರ್ಕಾರ ಎನ್ಎಂಆರ್ ಮೂಲಕ ಹಣ ಜಮಾ ಮಾಡಬೇಕು ಎಂದು ನಿಡುವಾಳೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನವೀನ್ ಹಾವಳಿ ಒತ್ತಾಯಿಸಿದ್ದಾರೆ.
ಕಡಿಮೆ ಇಳುವರಿ ಹಾಗೂ ಬೆಂಬಲ ಬೆಲೆಯ ಕೊರತೆಯಿಂದ ಹಲವು ಕೃಷಿಕರು ಭತ್ತದ ಕೃಷಿಯನ್ನು ಕೈಬಿಟ್ಟಿದ್ದಾರೆ. ತೋಟಗಾರಿಕೆ ಇಲಾಖೆಯಿಂದ ಅಡಿಕೆ, ಕಾಳು ಮೆಣಸು ಬೆಳೆಗಾರರಿಗೆ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಎನ್ಎಂಆರ್ ಮೂಲಕ ಹಣವನ್ನು ಜಮಾ ಮಾಡುವಂತೆ ಭತ್ತ ಬೆಳೆಯುವ ರೈತರಿಗೂ ಈ ವ್ಯವಸ್ಥೆ ಮಾಡಿದರೆ ರೈತರಿಗೆ ಅನುಕೂಲವಾಗಲಿದೆ. ಭತ್ತದ ಕೃಷಿಕರಿಗೆ ಸರ್ಕಾರ ಉತ್ತೇಜನ ನೀಡಬೇಕು. ರೈತರು ಅತಿವೃಷ್ಟಿ, ಅನಾವೃಷ್ಟಿ ಹಾಗೂ ಕಾಡು ಪ್ರಾಣಿಗಳ ಹಾವಳಿಯಿಂದ ನಷ್ಟ ಅನುಭವಿಸುತ್ತಿದ್ದು, ಅವರಿಗೆ ನೆರವಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.