ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಂದ್ರ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದ್ದಾರೆ: ಸಿ.ಟಿ ರವಿ

ಗೋಡೆ ಬರಹದ ಮೂಲಕ ಅಭಿಯಾನಕ್ಕೆ ಚಾಲನೆ
Published 16 ಜನವರಿ 2024, 14:41 IST
Last Updated 16 ಜನವರಿ 2024, 14:41 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ದೇಶದ ಗೌರವ ಹೆಚ್ಚಿಸಿ ಬಡವರು, ರೈತರು, ಮಹಿಳೆಯರ ಪರ ಹಲವು ಅಭಿವೃದ್ಧಿ ಕಾರ್ಯಕ್ರಮ ರೂಪಿಸಿದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ. ಆದ್ದರಿಂದ ಮತ್ತೊಮ್ಮೆ ಪ್ರಧಾನಿಯಾಗಿ ಅಧಿಕಾರಕ್ಕೆ ಬರಬೇಕು’ ಎಂದು ಬಿಜೆಪಿ ಮುಖಂಡ ಸಿ.ಟಿ ರವಿ ಹೇಳಿದರು.

ಬಿಜೆಪಿ ಯುವಮೋರ್ಚಾ ವತಿಯಿಂದ ನಗರದ ರತ್ನಗಿರಿ ರಸ್ತೆ ಸಹಿತ ವಿವಿಧೆಡೆ ಕೈಗೊಂಡಿರುವ ‘ಮತ್ತೊಮ್ಮೆ ಮೋದಿ ಸರ್ಕಾರ 3.0’ ಹೆಸರಿನ ಗೋಡೆ ಬರಹದ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದಲ್ಲಿ ಮಹಿಳೆಯರು, ರೈತರು, ಬಡವರು ಸೇರಿದಂತೆ ಎಲ್ಲ ವರ್ಗದ ಜನರ ಏಳಿಗೆಗೆ ನರೇಂದ್ರ ಮೋದಿ ಅವರು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕು ಎಂಬ ಆಶಯದೊಂದಿಗೆ ಗೋಡೆ ಬರಹದ ಮೂಲಕ ಅವರ ಯೋಜನೆಗಳನ್ನು ಜನತೆಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ರಾಮಮಂದಿರ ನಿರ್ಮಾಣ ಸಾಧ್ಯವಾಗಿರುವುದು ಮೋದಿ ನೇತೃತ್ವದ ಬಿಜೆಪಿ ಸರ್ಕಾರದಿಂದ ಮಾತ್ರ. ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಲಿದ್ದಾರೆ ಎಂದರು.

ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ್ ಕೋಟ್ಯಾನ್‌, ಜಿಲ್ಲಾ ಘಟಕದ ಉಪಾಧ್ಯಕ್ಷ ನರೇಂದ್ರ, ನಗರ ಮಂಡಲ ಅಧ್ಯಕ್ಷ ಮಧುಕುಮಾರ್ ರಾಜ್ ಅರಸ್, ಹಿರೇಮಗಳೂರು ಪುಟ್ಟಸ್ವಾಮಿ, ಕೇಶವಮೂರ್ತಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT