ಚಿಕ್ಕಮಗಳೂರು: ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿದ್ದ ನಾರಿ ಶಕ್ತಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ ಸೋಲಿಗೆ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಕಾರಣ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ಯಾಮಲಾ ಕುಂದರ್ ಹೇಳಿದರು.

ಕಾಂಗ್ರೆಸ್, ಟಿಎಂಸಿ, ಡಿಎಂಕೆ ಮತ್ತು ಸಮಾಜವಾದಿ ಪಕ್ಷಗಳು ಕುಟುಂಬ ಆಧಾರಿತ ರಾಜಕಾರಣ ಮಾಡುತ್ತಿವೆ. ಕುಟುಂಬದಿಂದಲೇ ನಡೆಸುತ್ತಿರುವ ಪಕ್ಷಗಳಾಗಿದ್ದು, ಮಹಿಳೆಯರ ಬಗ್ಗೆ ಈ ಪಕ್ಷಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿವೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಕಾಂಗ್ರೆಸ್ ಸೇರಿ ಇತರೆ ವಿರೋಧ ಪಕ್ಷಗಳು ಐದನೇ ಬಾರಿ ಮಹಿಳಾ ರಾಜಕೀಯ ಮೀಸಲಾತಿ ಅನುಮೋ ನೆಗೆ ಅಡ್ಡಿಪಡಿಸುತ್ತಿವೆ. ನಾರಿ ಶಕ್ತಿ ವಂದನ ಅಧಿನಿಯಮ ಸಂಸತ್ತಿನಲ್ಲಿ ಸೋಲಾದ ಕಾರಣ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳ ಸಂಸದರು ವಿಜಯೋತ್ಸವದ ರೀತಿಯಲ್ಲಿ ಕೇಕೆ ಹಾಕಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.

2011ರ ಜನಗಣತಿಯನ್ನು ಪರಿಗಣಿಸಿದರೆ ತಮಿಳುನಾಡಿನಲ್ಲಿ 10 ಲೋಕಸಭಾ ಸದಸ್ಯ ಸ್ಥಾನಗಳು ಹೆಚ್ಚಾಗುತ್ತಿದ್ದವು. ರಾಜ್ಯದಲ್ಲಿ 28 ಲೋಕಸಭಾ ಸದಸ್ಯ ಸ್ಥಾನಗಳಿಂದ 42 ಸ್ಥಾನಗಳಿಗೆ ಏರಿಕೆ ಆಗುವುದರ ಜೊತೆಗೆ ಮಹಿಳಾ ಪ್ರಾತಿನಿಧ್ಯವು ಹೆಚ್ಚಾಗುತ್ತಿತ್ತು ಎಂದು ತಿಳಿಸಿದರು.

ಚುನಾವಣೆಗಾಗಿ ಮಾಡುವ ವೆಚ್ಚ ಕಡಿಮೆ ಮಾಡುವ ಉದ್ದೇಶದಿಂದ ಒಂದು ದೇಶ, ಒಂದು ಚುನಾವಣೆ ಎಂಬ ಮಸೂದೆ ತರುವ ಗುರಿ ಹೊಂದಲಾಗಿದೆ. ಈ ಎಲ್ಲಾ ವಿಷಯಗಳನ್ನು ಆಧರಿಸಿ ಎಲ್ಲಾ ಜಿಲ್ಲೆಗಳಲ್ಲಿ ಏ.25 ರಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದಿಂದ ಜನಾಕ್ರೋಶ ಸಭೆ ನಡೆಯಲಿದ್ದು, ಚಿಕ್ಕಮಗಳೂರು ನಗರದಲ್ಲಿ ಸಂಜೆ 4 ಗಂಟೆಗೆ ಸಭೆ ನಡೆಯಲಿದೆ ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಜಸಂತಾ ಅನಿಲ್ಕುಮಾರ್, ಉಪಾಧ್ಯಕ್ಷೆ ಚೈತ್ರಶ್ರೀ ಮಾಲತೇಶ್, ಮಹಿಳಾ ಮೋರ್ಚಾದ ಮುಖಂಡ ಲೀಲಾ ಪರಮೇಶ್, ಕವಿತಾ ಶೇಖರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-126-1434842083

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.