ಮೂಗ್ತಿಹಳ್ಳಿ–ಮೂಡಿಗೆರೆ ರಸ್ತೆ ಅಭಿವೃದ್ಧಿಗೆ ಒಂದು ವಾರದಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘160 ಜನರಿಗೆ ಭೂಪರಿಹಾರ ನೀಡಬೇಕಿದ್ದು ಈ ಸಂಬಂಧ ನೋಟಿಸ್ ನೀಡುವ ಕೆಲಸ ಆರಂಭವಾಗಿದೆ. ಕಾಮಗಾರಿ ಆರಂಭಿಸಲು ತಯಾರಿ ಮಾಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದ್ದೇನೆ’ ಎಂದರು. ಚಿಕ್ಕಮಗಳೂರು–ಬೇಲೂರು ಚಿಕ್ಕಮಗಳೂರು ಬೈಪಾಸ್ ರಸ್ತೆ ಅಭಿವೃದ್ಧಿ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಎನ್‌ಎಚ್‌ಎಐ ಪ್ರಾದೇಶಿಕ ಅಧಿಕಾರಿಯನ್ನು ಜಿಲ್ಲೆಗೆ ಕರೆಸಿ ಕಾಮಗಾರಿ ತ್ವರಿತ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.