ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಂಪ್ರಾಯ ಉಳಿಸಿ ಬೆಳೆಸಿ’

Last Updated 28 ಸೆಪ್ಟೆಂಬರ್ 2022, 5:45 IST
ಅಕ್ಷರ ಗಾತ್ರ

ಬಾಳೆಹೊನ್ನೂರು: ಕಲೆ, ಸಂಸ್ಕೃತಿ, ಸಂಪ್ರದಾಯಗಳನ್ನು ಉಳಿಸಿ, ಬೆಳೆಸುವಂತಹ ಕಾರ್ಯಕ್ರಮಗಳನ್ನು ನಡೆಸು
ವುದು ಧಾರ್ಮಿಕ ಸಂಘ ಸಂಸ್ಥೆಗಳ ಮೇಲಿದೆ. ಯುವಜನತೆ ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಭಾರತೀಯ ಸನಾತನ ಸಂಸ್ಕೃತಿ, ಸಂಪ್ರದಾಯಗಳನ್ನು ತಿಳಿದುಕೊಳ್ಳಬೇಕು ಎಂದು ದುರ್ಗಾದೇವಿ ನವರಾತ್ರಿ ಪೂಜಾ ಸಮಿತಿ ಕಾರ್ಯಾಧ್ಯಕ್ಷ ವೈ.ಮೋಹನ್ ಕುಮಾರ್ ಹೇಳಿದರು.

ಪಟ್ಟಣದ ಮಾರ್ಕಾಂಡೇಶ್ವರ ದೇವಸ್ಥಾನದ ಮೃತ್ಯಂಬಿಕಾ ಅಮ್ಮನವರ ವೇದಿಕೆಯಲ್ಲಿ ಹದಿಮೂರನೇ ವರ್ಷದ ದುರ್ಗಾದೇವಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಸೋಮವಾರ ಆರಂಭಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ದಯಾಕರ್ ನಾ.ಸುವರ್ಣ, ಪ್ರಕಾಶ್ ಆಚಾರ್ಯ ಹಾಗೂ ಸಂಗಡಿಗರಿಂದ ಭಜನಾ ಕಾರ್ಯಕ್ರಮ ನಡೆಯಿತು. ನಂತರ ಪುತ್ತೂರಿನ ಸಮೃದ್ಧಿ ಮ್ಯೂಸಿಕಲ್ಸ್ ತಂಡದಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು. ಸಮಿತಿಯ ಖಜಾಂಚಿ ಭಾಸ್ಕರ್ ವೆನಿಲ್ಲಾ, ಕಾರ್ಯದರ್ಶಿ ಆರ್.ಡಿ.ಮಹೇಂದ್ರ, ಪ್ರಭಾಕರ್ ಪ್ರಣಸ್ವಿ, ಬಿ.ಚನ್ನಕೇಶವ್, ಡಿ.ಎನ್.ಸುಧಾಕರ್, ಬಿ.ಕೆ.ನಾಗರಾಜ್, ಮಂಜು ಹೊಳೆಬಾಗಿಲು, ಚೈತನ್ಯ ವೆಂಕಿ, ಶಿವರಾಮಶೆಟ್ಟಿ, ಗಿರೀಶ್, ಈಶ್ವರ್ ಇಟ್ಟಿಗೆ, ನಾರಾಯಣಶೆಟ್ಟಿ, ಚಂದ್ರಣ್ಣ, ಶ್ರೀಕಾಂತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT