ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿಯಲ್ಲಿ ಕ್ರಾಂತಿಕಾರಿ ಬದಲಾವಣೆ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿ.ಎಂ ಬಿ.ಎಸ್‌.ಯಡಿಯೂರಪ್ಪ
Last Updated 25 ಡಿಸೆಂಬರ್ 2020, 15:25 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿ ರುವ ಕೃಷಿ ಮಸೂದೆಗಳು ಪರಿಣಾಮಕಾರಿ ಯಾಗಿದ್ದು, ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಿವೆ. ರಾಜ್ಯದಲ್ಲಿ ಬೀಳುಬಿದ್ದಿರುವ 11 ಲಕ್ಷ ಹೆಕ್ಟೇರ್‌ ಜಾಗವನ್ನು ಕೃಷಿಗೆ ಬಳಸಿಕೊಳ್ಳಲು ಅನು ಕೂಲವಾಗಲಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಜಿಲ್ಲಾಡಳಿತದ ವತಿಯಿಂದ ನಗರದ ಸುಭಾಷ್‌ ಚಂದ್ರಬೋಸ್‌ ಜಿಲ್ಲಾ ಆಟದ ಮೈದಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿವಿಧ ಯೋಜನೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಬಂಜರು, ಇತರ ಒಣ ಪ್ರದೇಶಗಳನ್ನು ಕೃಷಿಯೇತರ ಮತ್ತು ಕೈಗಾರಿಕಾ ಚಟುವಟಿಕೆಗಳಿಗೆ ಬಳಸಿ ಕೊಳ್ಳಲು ಸಾಧ್ಯವಾಗಲಿದೆ. 2022ನೇ ಇಸವಿ ಹೊತ್ತಿಗೆ ರೈತರ ಆದಾಯ ದ್ವಿಗುಣಗೊಳಿಸುವುದು ಪ್ರಧಾನಿ ಮೋದಿ ಅವರ ಆಶಯವಾಗಿದೆ’ ಎಂದರು.

‘ರೈತ ಸಮುದಾಯಕ್ಕೆ ಅನುಕೂಲ ಕಲ್ಪಿಸಲು ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಅಪಪ್ರಚಾರ ಗಳಿಗೆ ರೈತರು ಕಿವಿಗೊಡಬಾರದು’ ಎಂದು ಮನವಿ ಮಾಡಿದರು.

ಶಾಸಕ ಸಿ.ಟಿ.ರವಿ ಅಧ್ಯಕ್ಷತೆ ವಹಿಸಿ ದ್ದರು. ಸಚಿವರಾದ ವಿ.ಸೋಮಣ್ಣ, ಭೈರತಿ ಬಸವರಾಜ, ಶಾಸಕರಾದ ಎಂ.ಪಿ.ಕುಮಾರಸ್ವಾಮಿ, ಟಿ.ಡಿ.ರಾಜೇಗೌಡ, ಡಿ.ಎಸ್‌.ಸುರೇಶ್‌, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ, ಉಪಾಧ್ಯಕ್ಷ ಸೋಮಶೇಖರಪ್ಪ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್‌.ಜೀವರಾಜ್‌, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆನಂದ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ದಾಕ್ಷಾಯಿಣಿ ಪೂರ್ಣೇಶ್‌, ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಎಂ.ಹಾಕೆ, ಜಿಲ್ಲಾ ಪಂಚಾಯಿತಿ ಸಿಇಒ ಎಸ್‌.ಪೂವಿತಾ, ಉಪವಿಭಾಗಾಧಿಕಾರಿ ಡಾ.ಎಚ್‌.ಎಲ್‌.ನಾಗರಾಜ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT