ಶನಿವಾರ, ಜೂನ್ 19, 2021
23 °C

ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ- 169 ರಲ್ಲಿ ತನಿಕೋಡಿನಿಂದ ಎಸ್.ಕೆ ಬಾರ್ಡರ್‌ವರಿಗೆ ಭಾರಿ ವಾಹನ ಸಂಚಾರಕ್ಕೆ ನಿಷೇಧಿಸಲಾಗಿದೆ.

ಮಾರ್ಗದಲ್ಲಿನ ಕಿರು ಸೇತುವೆಗಳು ಶಿಥಿಲಾವಸ್ಥೆಯಲ್ಲಿವೆ. ಹೀಗಾಗಿ, ಭಾರಿ ವಾಹನ (15 ಟನ್‌ಗಿಂತ ಹೆಚ್ಚಿನ ತೂಕ) ಸಂಚಾರ ನಿಷೇಧಿಸಲಾಗಿದೆ.

ಬದಲಿ ಮಾರ್ಗ: ಚಿಕ್ಕಮಗಳೂರು ಕಡೆಯಿಂದ ಬರುವ ವಾಹನಗಳು ಬಾಳೆಹೊನ್ನೂರು- ಮಾಗುಂಡಿ- ಕಳಸ- ಕುದುರೆಮುಖ- ಎಸ್.ಕೆ.ಬಾರ್ಡರ್ ಹಾಗೂ ನರಸಿಂಹರಾಜಪುರ ಕಡೆಯಿಂದ ಬರುವ ವಾಹನಗಳು ಕೊಪ್ಪ- ಹರಿಹರಪುರ-ಬಿದರೆಗೋಡು- ಆಗುಂಬೆ ಮಾರ್ಗವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.