ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‌ ಜತೆ ಒಳ ಒಪ್ಪಂದ ಇಲ್ಲ: ಸಿ.ಟಿ.ರವಿ

Last Updated 8 ಡಿಸೆಂಬರ್ 2021, 19:36 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ವಿಧಾನ ಪರಿಷತ್‌ ಚುನಾವಣೆಯಲ್ಲಿಜೆಡಿಎಸ್‌ ಸ್ಪರ್ಧಿಸದ ಕಡೆ, ಬಿಜೆಪಿಗೆ ಬೆಂಬಲ ನೀಡುವಂತೆ ಕೇಳಿದ್ದೇವೆ. ಆ ಪಕ್ಷದ ವರಿಷ್ಠರು ನಿರ್ಧಾರವನ್ನು ಸ್ಥಳೀಯ ಮುಖಂಡರ ವಿವೇಚನೆಗೆ ಬಿಟ್ಟಿದ್ದಾರೆ, ಜೆಡಿಎಸ್‌ನೊಂದಿಗೆ ಒಳ ಒಪ್ಪಂದ ಮಾಡಿಕೊಂಡಿಲ್ಲ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಈ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 11ರಿಂದ ಗರಿಷ್ಠ 16 ಸ್ಥಾನಗಳಲ್ಲಿ ಗೆಲ್ಲುವ ನಿರೀಕ್ಷೆ ಇದೆ. ಚಿಕ್ಕಮಗಳೂರಿನಲ್ಲಿ ಬಿಜೆಪಿಯ ಪ್ರಾಣೇಶ್‌ 500ಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ದತ್ತ ಪೀಠ ವಿಚಾರಕ್ಕೆ ಸಂಬಂಧಿಸಿದಂತೆ ಸಂಪುಟ ಉಪಸಮಿತಿ ರಚನೆಯಾಗಿದೆ. ಉಪಸಮಿತಿಯು ಪರಿಶೀಲನೆ ಮಾಡಿ ಶಿಫಾರಸು ಮಾಡಲಿದೆ. ದತ್ತಪೀಠದಲ್ಲಿ ಅರ್ಚಕರ ನೇಮಕಕ್ಕೆ ಸಂಬಂಧಿಸಿದ ಅಡೆತಡೆಗಳು ನಿವಾರಣೆ ಆಗುವ ಭರವಸೆ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಪ್ರಧಾನಿ ಮೋದಿ ಅವರನ್ನು ಜಗತ್ತಿನ ಎಲ್ಲ ಕಡೆ ಗುರುತಿಸುತ್ತಾರೆ. ಸಿದ್ದರಾಮಯ್ಯ ಅವರನ್ನು ಕರ್ನಾಟಕದ ಹೊರಗೆ ಯಾರೂ ಗುರುತಿಸಲ್ಲ, ಪಾಕಿಸ್ತಾನದಲ್ಲಿ ಯಾರಾದರೂ ಗುರುತಿಸಬಹುದು’ ಎಂದು ವ್ಯಂಗ್ಯವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT