ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಫಲ ಬಯಸದೆ ಸಮಾಜ ಸೇವೆ ಮಾಡಿ

ಜ್ವಾಲಾಮಾಲಿನಿ ಜೇಸಿ ಸಂಸ್ಥೆ ನೂತನ ಪದಾಧಿಕಾರಿಗಳ ಪದಗ್ರಹಣ
Last Updated 7 ಡಿಸೆಂಬರ್ 2022, 4:06 IST
ಅಕ್ಷರ ಗಾತ್ರ

ನರಸಿಂಹರಾಜಪುರ: ‘ಸಂಘ, ಸಂಸ್ಥೆಗಳು ಪ್ರತಿಫಲ ಅಪೇಕ್ಷಿಸದೆ ಸಮಾಜ ಸೇವೆಯಲ್ಲಿ ತೊಡಗಿಕೊಳ್ಳಬೇಕು’ ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.

ಇಲ್ಲಿನ ಸಹರಾ ಸಮುದಾಯ ಭವನದಲ್ಲಿ ಸೋಮವಾರ ರಾತ್ರಿ ನಡೆದ ಜ್ವಾಲಾಮಾಲಿನಿ ಜೇಸಿ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಜೇಸಿ ಸಮಾಜಮುಖಿ ಸಂಸ್ಥೆಯಾಗಿದೆ. ಇದು ಯುವಜನರಲ್ಲಿ ನಾಯಕತ್ವ ಗುಣ ಬೆಳೆಸಲು ಸಹಕಾರಿಯಾಗಿದೆ. ಜಾತಿ, ಧರ್ಮ ಭೇದವಿಲ್ಲದೆ ಎಲ್ಲರೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳುವುದು ಶ್ಲಾಘನೀಯ’ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಆರ್. ಸದಾಶಿವ ಮಾತನಾಡಿ, ‘ಶಿಕ್ಷಣ ಬದುಕಿಗೆ ಆಸರೆಯಾಗಿದ್ದರೆ, ಸಂಸ್ಕೃತಿ ಜೀವನದಲ್ಲಿ ಉತ್ತಮ ಸಂಸ್ಕಾರವನ್ನು ಕಲಿಸುತ್ತದೆ’ ಎಂದರು.

ಜೇಸಿ ವಲಯ 14ರ ಚುನಾಯಿತ ವಲಯಾಧ್ಯಕ್ಷೆ ಯಶಸ್ವಿನಿ ಮಾತನಾಡಿ, ‘ಜೇಸಿ ಸರ್ಕಾರೇತರ ಸಂಸ್ಥೆಯಾಗಿದೆ. ಸಮಾಜದ ಏಳಿಗೆಗೆ ಯುವಕರಲ್ಲಿ ನಾಯಕತ್ವ ಗುಣ ಬೆಳೆಸುವುದು ಸಂಸ್ಥೆಯ ಉದ್ದೇಶ’ ಎಂದರು.

ಜೇಸಿ ವಲಯ 14ರ ಉಪಾಧ್ಯಕ್ಷ ಎಚ್.ಆರ್.ಪ್ರಶಾಂತ್ ಮಾತನಾಡಿದರು. ಜ್ವಾಲಾಮಾಲಿನಿ ಜೇಸಿ ಸಂಸ್ಥೆಯ ಅಧ್ಯಕ್ಷ ವಿ.ಪಿ.ಚರಣ್ ರಾಜ್ ಅಧ್ಯಕ್ಷತೆ ವಹಿಸಿದ್ದರು.

ಜೇಸಿ ಸಂಸ್ಥೆ ನೂತನ ಅಧ್ಯಕ್ಷ ಕೆ.ಗಂಗಾಧರ್, ಕಾರ್ಯದರ್ಶಿ ಮಿಥುನ್ ಗೌಡ, ನಿಕಟಪೂರ್ವ ಅಧ್ಯಕ್ಷ ಸಾದತ್ ಸಮೀರ್, ಪುರುಷೋತ್ತಮ, ರಾಘವೇಂದ್ರ, ವಿನುತ ಚರಣ್ ರಾಜ್, ಸುನಿತಾ ಗಂಗಾಧರ್, ಸಾನ್ವಿಕ, ಜಿ.ಅಖಿಲಾ, ಎನ್.ಎಸ್.ಅರ್ಜುನ್, ದೇವರಾಜ್, ನಾಗರಾಜ್ ದೊಡ್ಡಮನೆ ಇದ್ದರು.

ಶಿಕ್ಷಕ ಮಂಜಪ್ಪ ಅವರನ್ನು ಸನ್ಮಾನಿಸಲಾಯಿತು. ಜೇಸಿ ಸಂಸ್ಥೆಯ ನೂತನ ಅಧ್ಯಕ್ಷ ಕೆ.ಗಂಗಾಧರ್ ಅವರಿಗೆ ವಲಯ 14ರ ಸೋಪರ್ ಸ್ಟಾರ್ ಪದವಿ ನೀಡಿ ಗೌರವಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT