ನರಸಿಂಹರಾಜಪುರ: ಬೆಂಗಳೂರಿನ ಕೆಲವು ಮತಗಟ್ಟೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ 25ಸಾವಿರಕ್ಕೂ ಅಧಿಕ ಮತಗಳನ್ನು ತೆಗೆದುಹಾಕಿ ಬಿಜೆಪಿ ವಾಮಮಾರ್ಗ ಹಿಡಿಯುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಆರೋಪಿಸಿದರು.

ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಘಟಕದ ಕಚೇರಿಯಲ್ಲಿ ಶನಿವಾರ ಗ್ರಾಮ ಪಂಚಾಯಿತಿ ಹಾಗೂ ಬೂತ್ ಮಟ್ಟದ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಖಾಸಗಿ ಸಂಸ್ಥೆಯನ್ನು ಬಳಸಿಕೊಂಡು ಬಿಜೆಪಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಸಲು ಮುಂದಾಗಿದೆ. ಈ ಪ್ರಕರಣವನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ಸುರ್ಜಿವಾಲ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಪ್ರತಿ ಬೂತ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಚ್ಚರಿಕೆ
ಯಿಂದ ಇರಬೇಕು’ ಎಂದರು.

‘ಚುನಾವಣೆ ಎಂಬುದು ಯುದ್ಧದಂತೆ. ಈ ತಿಂಗಳ ಒಳಗೆ ಎಲ್ಲಾ ಬೂತ್ ಸಮಿತಿಯವರು ಮತದಾರರಪಟ್ಟಿ ತಯಾರಿಸಬೇಕು. ಮತಗಟ್ಟೆಯಲ್ಲಿ ಯಾರ ಹೆಸರು ಬಿಟ್ಟು ಹೋಗಿದೆ, ಹೊಸದಾಗಿ ಯಾವ ಹೆಸರು ಸೇರಿದೆ ಎಂಬುದನ್ನು ತಿಳಿದುಕೊಳ್ಳಬೇಕು. 18ವರ್ಷ ಪೂರ್ಣಗೊಂಡ ಮತದಾರರನ್ನು ಮತದಾರರಪಟ್ಟಿಗೆ ಸೇರಿಸಬೇಕು ಎಂದರು. ಬಿಜೆಪಿ ದೇಶ,ರಾಜ್ಯದಲ್ಲಿ ಹಿಂಬಾಗಿಲಿನ ಮೂಲಕ ಅಧಿಕಾರಿ ಹಿಡಿಯಲು ಪ್ರಯತ್ನಿಸುತ್ತದೆ ಎಂದು ದೂರಿದರು. ಯಾವುದೇ ಸಂದರ್ಭದಲ್ಲಿ ಕಾರ್ಯಕರ್ತರ ಜತೆ ಕಾಂಗ್ರೆಸ್ ಪಕ್ಷದ ಮುಖಂಡರು ಬೆನ್ನೆಲುಬಾಗಿ ನಿಲ್ಲುತ್ತಾರೆ. ಒಗ್ಗಟಿನಿಂದ ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು’ ಎಂದರು.

ಜಿಲ್ಲಾ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಈ.ಸಿ.ಜೋಯಿ,ಜಿಲ್ಲಾ ಕಾರ್ಯದರ್ಶಿ ಕೆ.ಎಂ.ಸುಂದರೇಶ್, ಬಿ.ವಿ.ಉಪೇಂದ್ರ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದಾ,ಮುಖಂಡ ಕೆ.ಎ.ಅಬೂಬಕರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.