ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರಸಿಂಹರಾಜಪುರ: ‘ಶಿಕ್ಷಕ–ವಿದ್ಯಾರ್ಥಿ ನಡುವೆ ಭಾವನಾತ್ಮಕ ಸಂಬಂಧ’

Last Updated 6 ಸೆಪ್ಟೆಂಬರ್ 2022, 5:45 IST
ಅಕ್ಷರ ಗಾತ್ರ

ನರಸಿಂಹರಾಜಪುರ: ಮಕ್ಕಳ ಮನಸ್ಸನ್ನು ಅರಳಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಚಿಕ್ಕಮಗಳೂರು ಅವತಿ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ರೇಖಾ ನಾಗರಾಜರಾವ್ ಹೇಳಿದರು.

ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪ್ರಾಥಮಿಕ ಶಾಲಾ ಆವರಣದಲ್ಲಿ ಸೋಮವಾರ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಅವರು ಉಪನ್ಯಾಸ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಆರ್.ಪುಷ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಮಾತನಾಡಿ, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಹಾಗೂ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಜನ್ಮದಿನವನ್ನು ಮಕ್ಕಳ ದಿನವನ್ನಾಗಿ ಆಚರಿಸುವುದು ಒಂದಕ್ಕೊಂದು ಪೂರಕವಾಗಿದೆ ಎಂದರು.

ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದಾ ವಹಿಸಿದ್ದರು. ಪಟ್ಟಣ ಪಂಚಾಯಿತಿ ಸದಸ್ಯೆ ಸುರಯ್ಯಬಾನು, ತಾಲ್ಲೂಕು ಪಂಚಾಯಿತಿ ಇಒ ನಯನಾ, ಬಿಸಿಯೂಟ ಯೋಜನೆಯ ಸಹಾಯಕ ನಿರ್ದೇಶಕ ಧನಂಜಯ ಮೇಧೂರ, ವಾಲ್ಮೀಕಿ ಸಂಘದ ಕ್ಷೇತ್ರಾಧ್ಯಕ್ಷ ಶ್ರೀನಿವಾಸ್, ಡಿಎಸ್ಎಸ್ ಮುಖಂಡರಾದ ಡಿ.ರಾಮು, ಶಿವಣ್ಣ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಚಂದ್ರಕಾಂತ್, ಬಿ.ಆರ್.ಸಿ ಸೇವ್ಯಾ ನಾಯಕ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನಂಜುಂಡಪ್ಪ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಭದ್ರೇಗೌಡ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕೊಟ್ರೇಶಪ್ಪ, ದೈಹಿಕ ಶಿಕ್ಷಣ ಪರಿವೀಕ್ಷಕ ಮಕ್ಬಲ್ ಅಹಮ್ಮದ್, ನಟರಾಜ್, ಮೋಹನ್ ರಾಜ್, ತಮನ್ನಾ, ವಾಸು ಇದ್ದರು.

ಪ್ರಾಥಮಿಕ ಶಾಲಾ ವಿಭಾಗದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಗಾಂಧಿ ಗ್ರಾಮದ ಶಾಲೆಯ ಶ್ರೀದೇವಿ, ಜಾಕ್ಸನ್ ಶಾಲೆಯ ಪವಿತ್ರಾ, ಹಿಳುವಳ್ಳಿ ಶಾಲೆಯ ಶಿಲ್ಪಕಲಾ, ಆಲ್ದಾರ ಶಾಲೆಯ ರಾಪ್ಪ, ಪ್ರೌಢಶಾಲಾ ವಿಭಾಗದಲ್ಲಿ ಕಟ್ಟಿನಮನೆ ಪ್ರೌಢಶಾಲೆಯ ಸುನೀತಾ, ಕೆಪಿಎಸ್‌ ಶಾಲೆಯ ಕಿರಣ್ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಚಿತ್ರಕಲೆ ಸ್ಪರ್ಧೆ
ಕೊಪ್ಪ:
ರೋಟರಿ ಕ್ಲಬ್ ಕೊಪ್ಪ, ಪೌರಗಣೇಶೋತ್ಸವ ಸೇವಾ ಸಮಿತಿ ಸಹಯೋಗದಲ್ಲಿ 18 ವರ್ಷದೊಳಗಿನ ಮಕ್ಕಳಿಗೆ ಸ್ಥಳದಲ್ಲೇ ಗಣಪತಿ ಚಿತ್ರ ಬಿಡಿಸುವ ಸ್ಪರ್ಧೆ (ಪ್ರತಿದಿನ) ಆಯೋಜಿಸಲಾಗಿದೆ. ಚಿತ್ರ ಬಿಡಿಸಲು ಪರಿಕರ ನೀಡಲಾಗುತ್ತದೆ. ಪೌರ ಗಣಪತಿ ವಿಸರ್ಜನೆಯ ದಿನದಂದು ವಿಜೇತರಿಗೆ ಬಹುಮಾನ ವಿತರಿಸಲಾಗುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT