ಬುಧವಾರ, ಜನವರಿ 27, 2021
16 °C

ಕಾರು ಮುಖಾಮುಖಿ ಡಿಕ್ಕಿ: ಒಬ್ಬರು ಸಾವು, ಆರು ಮಂದಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲ್ಲೂಕಿನ ರಂಗೇನಹಳ್ಳಿ ಸಮೀಪದ ಹಲಸೂರು ಕೆರೆ ಏರಿ ರಸ್ತೆಯಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿಯಾಗಿ, ಒಬ್ಬರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.

ಗಾಯಗೊಂಡವರಲ್ಲಿ ಇಬ್ಬರನ್ನು ಚಿಕಿತ್ಸೆಗೆ ಶಿವಮೊಗ್ಗಕ್ಕೆ ಒಯ್ಯಲಾಗಿದೆ. ತರೀಕೆರೆಯಲ್ಲಿ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯಾಹ್ನ 12.40ರ ಹೊತ್ತಿನಲ್ಲಿ ಅವಘಡ ಸಂಭವಿಸಿದೆ. ಕಾರುಗಳು ನಜ್ಜುಗುಜ್ಜಾಗಿವೆ. ಒಂದು ಕಾರು ಲಕ್ಕವಳ್ಳಿಗೆ ಕಡೆಗೆ ಮತ್ತೊಂದು ಕಾರು ತರೀಕೆರೆ ಕಡೆಗೆ ಸಂಚರಿಸುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಲಕ್ಕವಳ್ಳಿ ಠಾಣೆ ಪೊಲೀಸರು ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು