ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರದ ಆರ್ಥಿಕ ನೀತಿ ವಿರುದ್ಧ ಆಕ್ರೋಶ

Published 1 ಮಾರ್ಚ್ 2024, 4:24 IST
Last Updated 1 ಮಾರ್ಚ್ 2024, 4:24 IST
ಅಕ್ಷರ ಗಾತ್ರ

ಬಂಟ್ವಾಳ: ‘ಒಕ್ಕೂಟ ವ್ಯವಸ್ಥೆ ಮತ್ತು ಸಂವಿಧಾನ ಬದ್ಧ ದೇಶದಲ್ಲಿ ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಿಂದ ಪರೋಕ್ಷವಾಗಿ ಸಂಗ್ರಹಿಸುತ್ತಿರುವ ತೆರಿಗೆ ಹಣವನ್ನು ರಾಜ್ಯಗಳಿಗೆ ಸಮಾನವಾಗಿ ಹಂಚಿಕೆ ಮಾಡುವಲ್ಲಿ ವಿಫಲವಾಗಿದೆ’ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ  ಬಿ.ಶೇಖರ್ ಆರೋಪಿಸಿದರು.

ಇಲ್ಲಿನ ಬಿ.ಸಿ.ರೋಡು ಮಿನಿವಿಧಾನ ಸೌಧ ಎದುರು ಸಿಪಿಐ ವತಿಯಿಂದ ಕೇಂದ್ರ ಸರ್ಕಾರದ ಆರ್ಥಿಕ ನೀತಿ ವಿರುದ್ಧ ಗುರುವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆ ಹಿಂಪಡೆಯದೆ ಈಗಿನ ಸಕಾರವೂ ಮುಂದುವರಿಸಿರುವುದು ಖಂಡನೀಯ ಎಂದರು. ಅಂಗನವಾಡಿ,  ಆಶಾ ಕಾರ್ಯಕರ್ತೆಯರು ಸೇರಿದಂತೆ ಕಟ್ಟಡ ಕಾರ್ಮಿಕರಿಗೆ ಸರ್ಕಾರ ಘೋಷಿಸಿದ್ದ 6ನೇ ಗ್ಯಾರಂಟಿ ಇನ್ನೂ ಜಾರಿಯಾಗಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸಿಪಿಐ ಜಿಲ್ಲಾ ಸಹ ಕಾರ್ಯದರ್ಶಿ ವಿ.ಸೀತಾರಾಂ ಬೇರಿಂಜ ಮಾತನಾಡಿದರು. ಬಿಸಿರೋಡು ಕಚೇರಿಯಿಂದ ಮೆರವಣಿಗೆ ನಡೆಯಿತು. ಮುಖಂಡ ಬಿ.ಬಾಬು ಭಂಡಾರಿ, ರಾಮ ಮುಗೇರ ವಿಟ್ಲ, ಶ್ರೀನಿವಾಸ ಭಂಡಾರಿ, ಓ ಕೃಷ್ಣ, ಭೋಜ ಕರಂಬೇರ, ಹರ್ಷಿತ್ ಬಂಟ್ವಾಳ, ಶಮಿತಾ, ಕುಸುಮಾ ಕಳ್ಳಿಗೆ, ಕೇಶವತಿ, ಮಮತಾ, ರತಿ ಎಸ್. ಭಂಡಾರಿ, ಮೋಹಿನಿ, ಕಮಲಾಕ್ಷ ಭಂಡಾರಿ ಮತ್ತಿತರರು ಇದ್ದರು. ಸಿಪಿಐ ಕಾರ್ಯದರ್ಶಿ ಸುರೇಶ್ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಕಾರ್ಯದರ್ಶಿ ಪ್ರೇಮನಾಥ ಕೆ. ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT