ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಮ್ಲಜನಕ ಘಟಕ ಸ್ಥಾಪನೆಗೆ ಕೇಂದ್ರ ಅನುಮೋದನೆ’

Last Updated 8 ಮೇ 2021, 5:07 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ಕೇಂದ್ರ ಸರ್ಕಾರ ಹಲವಾರು ಪೆಟ್ರೋಲ್ ಕಂಪನಿಗಳ ಸಹಭಾಗಿತ್ವದಲ್ಲಿ ಎಲ್ಲ ಜಿಲ್ಲೆಗಳಲ್ಲಿ ಆಮ್ಲಜನಕ ಪಿಎಸ್‌ಎ ಘಟಕ ತೆರೆಯಲು ಉದ್ದೇಶಿಸಿದೆ’ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ರಾಜ್ಯದ 28 ಜಿಲ್ಲೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕಗಳನ್ನು ತೆರೆಯಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಈ ಎಲ್ಲಾ ಘಟಕಗಳು ಕೇಂದ್ರ ಪೆಟ್ರೋಲಿಯಂ ಸಚಿವಾಲಯದ ಸಹಯೋಗದಲ್ಲಿ ನಿರ್ಮಾಣವಾಗಲಿವೆ. ಉಡುಪಿಯ ಜಿಲ್ಲೆಯಲ್ಲಿ ಕುಂದಾಪುರ ತಾಲ್ಲೂಕು ಆಸ್ಪತ್ರೆ ಆವರಣದಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ಜಿಎಐಎಲ್ ಸಂಸ್ಥೆಯು ನಿರ್ಮಿಸಲಿದೆ. ಚಿಕ್ಕಮಗಳೂರಿನ ಜಿಲ್ಲಾಆಸ್ಪತ್ರೆಯ ಆವರಣದಲ್ಲಿ ಸಿಪಿಸಿಎಲ್ (ಚೆನ್ನೈ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್) ಸಂಸ್ಥೆಯು ಆಮ್ಲಜನಕ ಘಟಕ ನಿರ್ಮಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT