ಶನಿವಾರ, ಡಿಸೆಂಬರ್ 3, 2022
28 °C

ಬಾಳೆಹೊನ್ನೂರು: ಪಾಕ್ ಪರ ಘೋಷಣೆ, ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೇರೂರು(ಬಾಳೆಹೊನ್ನೂರು): ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಅಸ್ಸಾಂನ ಕಾರ್ಮಿಕರ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹೇರೂರು ಸಮೀಪದ ಹುಲ್ಸೆ ಬಳಿ ರಸ್ತೆಯಲ್ಲಿ ಅಸ್ಸಾಂನ ಕಾರ್ಮಿಕರು ಬುಧವಾರ ಸಂಜೆ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗಿದ್ದಾರೆ. ಅಲ್ಲಿದ್ದ ಸ್ಥಳೀಯ ಕಾರ್ಮಿಕರು ಅವರನ್ನು ಪ್ರಶ್ನಿಸಲು ಮುಂದಾಗಿದ್ದಾರೆ. ಆಗ ಅಸ್ಸಾಂ ಕಾರ್ಮಿಕರು ತಾವು ಕೆಲಸ ಮಾಡುವ ತೋಟಕ್ಕೆ ಹೋಗಿದ್ದಾರೆ. ಸ್ಥಳೀಯ ಕಾರ್ಮಿಕರು ಈ ಕುರಿತು ಖಾಸಗಿ ಎಸ್ಟೇಟ್ ವ್ಯವಸ್ಥಾಪಕರ ಗಮನ ಸೆಳೆದಿದ್ದರು.ಈ ಹಿನ್ನಲೆಯಲ್ಲಿ ವ್ಯವಸ್ಥಾಪಕ‌ ನಾರಾಯಣಮೂರ್ತಿ ಬಾಳೆಹೊನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪೊಲೀಸರು ಅಸ್ಸಾಂ ಮೂಲದ ಆಜ್ಮಲ್ ಆಲಿ, ಆಹಿಲ್ ಉದ್ದೀನ್ ಹಾಗೂ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಪಟ್ಟವರನ್ನು ಠಾಣೆಗೆ ಕರೆ ತಂದು ವಿಚಾರಣೆ ನಡೆಸಿದರು.

ಟಿ20 ಕ್ರಿಕೆಟ್‌ನಲ್ಲಿ ಪಾಕಿಸ್ತಾನ ಗೆಲುವು ಸಾಧಿಸಿದ ಕಾರಣ ಘೋಷಣೆ ಕೂಗಿದ್ದಾಗಿ ಅವರು ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು