ತರೀಕೆರೆ: ‘ಪಂಚರಾಜ್ಯಗಳ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದಾಗಲೇ ಸಂಸತ್ತಿನಲ್ಲಿ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ ಮಂಡಿಸಿರುವುದು ಬಿಜೆಪಿಯ ಚುನಾವಣಾ ಗಿಮಿಕ್’ ಎಂದು ಕೆಡಿಪಿ ಸದಸ್ಯೆ ರಚನಾ ಶ್ರೀನಿವಾಸ್ ಆರೋಪಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ತರೀಕೆರೆ ಮತ್ತು ಅಜ್ಜಂಪುರ ಬ್ಲಾಕ್ ಮಹಿಳಾ ಘಟಕಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ‘ಮಹಿಳಾ ಮೀಸಲಾತಿ ಕುರಿತು ಬಿಜೆಪಿ ಬೂಟಾಟಿಕೆ ಮಾತು ಗಳನ್ನೇ ಆಡುತ್ತಿದೆ. ಮಸೂದೆಯನ್ನು ಮಂಡಿಸುವಾಗ ವಿರೋಧ ಪಕ್ಷಗಳೊಂದಿಗೆ ಚರ್ಚಿಸದೇ ತರಾತುರಿಯಲ್ಲಿ ಮಂಡಿಸಿದ್ದರಿಂದ ಅದು ಸೋಲುವಂ ತಾಗಿದೆ. ಈಗ ಅದರ ಹೊಣೆಯನ್ನು ಕಾಂಗ್ರೆಸ್ ಮೇಲೆ ಹಾಕಲು ಪ್ರಯತ್ನಿಸುತ್ತಿರುವುದು ಖಂಡನೀಯ’ ಎಂದರು.

ಮಹಿಳಾ ಕಾಂಗ್ರೆಸ್ ತರೀಕೆರೆ ಬ್ಲಾಕ್ ಅಧ್ಯಕ್ಷೆ ಪರ್ವೀನ್ ತಾಜ್ ಮಾತನಾಡಿ, ಈಗಾಗಲೇ ಜಾರಿಯಲ್ಲಿರುವ ಶೇ 33 ಮೀಸಲಾತಿಯಲ್ಲೇ ಶಾಸನಸಭೆಗಳಲ್ಲಿ ಒಬಿಸಿ ಹಾಗೂ ಎಸ್ಸಿ/ಎಸ್ಟಿ ವರ್ಗಗಳಿಗೆ ಪ್ರತ್ಯೇಕ ಮೀಸಲಾತಿ ನಿಗದಿಪಡಿಸಿ ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷೆ ಹೇಮಲತಾ ರೇವಣ್ಣ, ‘ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಮರುವಿಂಗಡಣೆ ಮಸೂದೆಗಳನ್ನು ಜೊತೆಯಾಗಿ ಮಂಡಿಸಿರುವುದು ಸರಿಯಲ್ಲ. ಕ್ಷೇತ್ರ ಮರುವಿಂಗಡಣೆಯಿಂದ ಉತ್ತರ ರಾಜ್ಯಗಳಿಗೆ ಹೆಚ್ಚು ಲಾಭವಾಗುವ ಸಾಧ್ಯತೆ ಇದೆ, ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗುತ್ತದೆ’ ಎಂದರು.

ಅಜ್ಜಂಪುರ ತಾಲ್ಲೂಕು ಬ್ಲಾಕ್ ಅಧ್ಯಕ್ಷೆ ರಂಜಿತಾ ಮಾತನಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-126-2056414858

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.