ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಫ್‌ಐ ನಿಷೇಧಕ್ಕೆ ಸ್ವಾಗತ

Last Updated 30 ಸೆಪ್ಟೆಂಬರ್ 2022, 2:53 IST
ಅಕ್ಷರ ಗಾತ್ರ

ಬಾಳೆಹೊನ್ನೂರು: ಕೇಂದ್ರ ಸರ್ಕಾರ ಮತೀಯ ದ್ವೇಷ ಮತ್ತು ದೇಶವಿರೋಧಿ ಕ್ರಿಮಿನಲ್ ಚಟುವಟಿಕೆಯ ಇತಿಹಾಸ ಹೊಂದಿರುವ ಪಿ.ಎಫ್.ಐ ಸಂಘಟನೆಯನ್ನು ನಿಷೇಧಿಸಿದ ಕ್ರಮವನ್ನು ಪ್ರಜಾಪ್ರಭುತ್ವ ಉಳಿಸಿ ಅಂದೋಲನ ವೇದಿಕೆ ಸ್ವಾಗತಿಸುತ್ತದೆ ಎಂದು ವೇದಿಕೆಯ ಕಾರ್ಯಕರ್ತ ನಾಗೇಶ್ ಅಂಗೀರಸ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮತಬ್ಯಾಂಕ್ ಉದ್ದೇಶಕ್ಕಾಗಿ ಪಿ.ಎಫ್.ಐ ಹಾಗೂ ಎಸ್.ಡಿ.ಪಿ.ಐ ಸಂಘಟನೆಗಳ ಮೇಲಿನ 176 ಜನರ ಮೊಕದ್ದಮೆಗಳನ್ನು ಹಿಂಪಡೆದಿದ್ದರು ಎಂದು ದೂರಿದ್ದಾರೆ.

2000ನೇ ಇಸವಿಯಲ್ಲಿ ನಿಷೇಧಗೊಂಡ ಸಿಮಿ ಸಂಘಟನೆಯ 2006ರಲ್ಲಿ ಪಿಎಫ್ಐ ಹೆಸರಿನಲ್ಲಿ ಮರುಜೀವ ಪಡೆದಿದೆ. ಕೇರಳದ ಕಮ್ಯುನಿಷ್ಟ್ ಮತ್ತು ಕಾಂಗ್ರೆಸ್‌ ಸರ್ಕಾರಗಳು ಈ ಹಿಂದೆಯೇ ಪಿ.ಎಫ್.ಐ ಸಂಘಟನೆಯ ದೇಶವಿರೋಧಿ ಚಟುವಟಿಕೆಗಳ ವಿವರಗಳನ್ನು ಕೇಂದ್ರಕ್ಕೆ ಸಲ್ಲಿಸಿದ್ದು, ನಿಷೇಧಿಸುವಂತೆ ಶಿಫಾರಸು ಮಾಡಿದ್ದವು. ಆದರೆ, ರಾಜ್ಯದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ನಿರ್ಧಾರದಿಂದ ರಾಜ್ಯದ ಜನತೆಗೆ ಅಪಮಾನ ಉಂಟುಮಾಡಿದ್ದರು ಎಂದು ಆರೋಪಿಸಿದ್ದಾರೆ.

2009ರಲ್ಲಿಯೇ ನಿಷೇಧಿಸುವಂತೆ ಒತ್ತಾಯಿಸಿದ್ದೆವು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT