ಶನಿವಾರ, ಮೇ 28, 2022
31 °C

ಪೋಕ್ಸೊ ಪ್ರಕರಣ: ಆರೋಪಿ ಶಿಕ್ಷಕನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಎನ್‌.ಆರ್.ಪುರ ತಾಲ್ಲೂಕಿನ ಸರ್ಕಾರಿ ಶಾಲೆಯ ಆರೋಪಿ ದೈಹಿಕ ಶಿಕ್ಷಣ ಶಿಕ್ಷಕನನ್ನು ಬಂಧಿಸಲಾಗಿದೆ.

ಮೊಬೈಲ್‌ ಫೋನ್‌ ಕರೆ ವಿವರ (ಸಿಡಿಆರ್‌) ಇತ್ಯಾದಿ ಸುಳಿವು ಆಧರಿಸಿ ಆರೋಪಿಯ ಜಾಡು ಪತ್ತೆ ಹೆಚ್ಚಲಾಯಿತು. ತರೀಕೆರೆ ಭಾಗದಲ್ಲಿ ಬಂಧಿಸಲಾಯಿತು.

ಈವರೆಗೆ ಸುಮಾರು 11 ಪೋಷಕರು ದೂರು ನೀಡಿದ್ದಾರೆ. ವಿಚಾರಣೆಯಲ್ಲಿ ಕೆಲ ಮಾಹಿತಿಗಳು ಸಿಕ್ಕಿವೆ.

ಆರೋಪಿಯನ್ನು ಕೋರ್ಟ್‌ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್‌ ಎಂ.ಹಾಕೆ ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು