ಬಾಲಕಿ ಅತ್ಯಾಚಾರ ಪ್ರಕರಣ: ತನಿಖಾಧಿಕಾರಿ ಸಿದ್ರಾಮಯ್ಯ ಅಮಾನತು

ಚಿಕ್ಕಮಗಳೂರು: ಶೃಂಗೇರಿಯ ಬಾಲಕಿ ಅತ್ಯಾಚಾರ ಪ್ರಕರಣದ ತನಿಖಾಧಿಕಾರಿ ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಎಂ. ಸಿದ್ರಾಮಯ್ಯ ಅವರನ್ನು ಅಮಾನತುಗೊಳಿಸಲಾಗಿದೆ.
ತನಿಖಾಧಿಕಾರಿ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದಾರೆ, ಬೆದರಿಕೆ ಹಾಕಿದ್ದಾರೆ, ದೂರು ದಾಖಲಿಸಿಕೊಳ್ಳಲು ವಿಳಂಬ ಮಾಡಿದ್ದಾರೆ ಎಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಜಿ. ಸುಬ್ರಹ್ಮಣ್ಯ ಅವರು ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು.
ಈ ಸಂಬಂಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಇನ್ಸ್‌ಪೆಕ್ಟರ್ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.