ಮೂಡಿಗೆರೆ (ಚಿಕ್ಕಮಗಳೂರು): ಕುಟುಂಬದೊಂದಿಗೆ ಕಾರಿನಲ್ಲಿ ಪ್ರವಾಸ ತೆರಳುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕಾರಿಗೆ ‘ಪೊಲೀಸ್’ ನಾಮಫಲಕ ಹಾಕಿಕೊಂಡಿದ್ದಕ್ಕೆ ಸ್ಥಳೀಯ ಪೊಲೀಸರು ಅವರಿಗೆ ದಂಡ ವಿಧಿಸಿದ ಘಟನೆ ಕೊಟ್ಟಿಗೆಹಾರದ ಚೆಕ್ ಪೋಸ್ಟ್ನಲ್ಲಿ ಗುರುವಾರ ನಡೆದಿದೆ.

ಧಾರವಾಡ ಮೂಲದ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಖಾಸಗಿ ವಾಹನದ ಮುಂಭಾಗಕ್ಕೆ ‘ಪೊಲೀಸ್’ ಎಂಬ ನಾಮ ಫಲಕ ಹಾಕಿ ಧಾರವಾಡದಿಂದ ಧರ್ಮಸ್ಥಳಕ್ಕೆ ಕುಟುಂಬದೊಂದಿಗೆ ಪ್ರವಾಸ ತೆರಳುತ್ತಿದ್ದರು. ಕೊಟ್ಟಿಗೆಹಾರದ ಚೆಕ್ಪೋಸ್ಟ್ನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದ ಬಣಕಲ್ ಸಬ್ ಇನ್ಸ್ಪೆಕ್ಟರ್ ರೇಣುಕಾ ಹಾಗೂ ಸಿಬ್ಬಂದಿ ಆ ಕಾರನ್ನು ತಡೆದು ಪರಿಶೀಲನೆ ನಡೆಸಿದ್ದಾರೆ.

ಕರ್ತವ್ಯದಲ್ಲಿ ಇಲ್ಲದ ಸಂದರ್ಭದಲ್ಲಿ ಪೊಲೀಸ್ ನಾಮ ಫಲಕ ಅಳವಡಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ನಿಯಮ ಉಲ್ಲಂಘಿಸಿದ ಅಧಿಕಾರಿಗೆ ದಂಡ ವಿಧಿಸಿ, ಫಲಕವನ್ನು ತೆರವು ಮಾಡಿ ಕಳುಹಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.