ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್‌: ಸಂಬಳವಿಲ್ಲದೆ ಅತಿಥಿ ಉಪನ್ಯಾಸಕರ ಪಡಿಪಾಟಲು

Last Updated 4 ಮೇ 2019, 1:47 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ನಗರದ ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್‌ನ ಅತಿಥಿ ಉಪನ್ಯಾಸಕರು ಒಂದೂವರೆ ವರ್ಷದಿಂದ ಸಂಬಳವಾಗದೆ ಪರದಾಡುವಂತಾಗಿದೆ. ಸಂಬಳ ನೀಡುವಂತೆ ಸಂಬಂಧಪಟ್ಟವರಿಗೆ ಮೊರೆ ಇಟ್ಟರೂ ಪ್ರಯೋಜನವಾಗಿಲ್ಲ.

ಕಾಲೇಜಿನಲ್ಲಿ ಆರು ಡಿಪ್ಲೊಮಾ ಕೋರ್ಸ್‌ಗಳು ಇವೆ. ಎಂಟು ಮಂದಿ ಅತಿಥಿ ಉಪನ್ಯಾಸಕರು ಇದ್ದಾರೆ. ‘ಕಂಪ್ಯೂಟರ್‌ ಸೈನ್ಸ್‌’, ‘ಎಲೆಕ್ಟ್ರಾನಿಕ್ಸ್‌–ಕಮ್ಯುನಿಕೇಷನ್‌’ ಇತರ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಂಬಳ ನೀಡದಿರುವುವದರಿಂದ ಸಂಕಷ್ಟ ಅನುಭವಿಸುವಂತಾಗಿದೆ.

‘ಪಾಠ, ಪ್ರವಚನ, ನಿಯೋಜಿತ ಕೆಲಸಗಳನ್ನು ನಿರ್ವಹಿಸಿದ್ದೇವೆ. ಹಲವು ಬಾರಿ ಮನವಿ ಮಾಡಿದ್ದರೂ ಸಂಬಂಧಪಟ್ಟವರು ಸಮಸ್ಯೆ ಪರಿಹರಿಸಲು ಗಮನ ಹರಿಸಿಲ್ಲ. ಬರಿ ಸಬೂಬು ನೀಡುತ್ತಾರೆ. ಸಮಸ್ಯೆಯನ್ನು ಶಾಸಕರ ಗಮನಕ್ಕೆ ತಂದಿದ್ದೇವೆ’ ಎಂದು ಅತಿಥಿ ಉಪನ್ಯಾಸಕರೊಬ್ಬರು ‘ಪ್ರಜಾವಾಣಿ’ಯೊಂದಿಗೆ ಅಳಲು ತೋಡಿಕೊಂಡರು.

‘ಮಾಡಿದ ಕೆಲಸಕ್ಕೆ ವರ್ಷ ಕಳೆದರೂ ಸಂಬಳ ಕೊಡದಿದ್ದರೆ ಜೀವನ ನಿರ್ವಹಿಸುವುದು ಹೇಗೆ. ನಮ್ಮ ಗೋಳು ಕೇಳುವವರಿಲ್ಲ’ ಎಂದು ಅತಿಥಿ ಉಪನ್ಯಾಸಕಿಯೊಬ್ಬರು ಸಂಕಟ ತೋಡಿಕೊಂಡರು.‘ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ₹ 8,000 ಸಂಬಳ ನೀಡಲಾಗುತ್ತದೆ. ರಾಜ್ಯದ ಬಹಳಷ್ಟು ಪಾಲಿಟೆಕ್ನಿಕ್‌ಗಳಲ್ಲಿ ಈ ಉಪನ್ಯಾಸಕರಿಗೆ ಕೆಲ ತಿಂಗಳಿನಿಂದ ಸಂಬಳವಾಗಿಲ್ಲ. ಸರ್ಕಾರದಿಂದ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶನಾಲಯಕ್ಕೆ ಅನುದಾನ ಬಿಡುಗಡೆಯಾಗಿಲ್ಲ. ಹೀಗಾಗಿ, ಕೆಲ ತಿಂಗಳಿನಿಂದ ಅತಿಥಿ ಉಪನ್ಯಾಸಕರ ಸಂಬಳ ಆಗಿಲ್ಲ. ಬಿಡುಗಡೆಯಾದ ತಕ್ಷಣ ಅವರ ಖಾತೆಗೆ ಪಾವತಿಯಾಗುತ್ತದೆ’ ಎಂದು ಕಾಲೇಜಿನ ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT