ಚಿಕ್ಕಮಗಳೂರು: ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲೆಗೆ ಸಂಬಂಧಿಸಿದಂತೆ ಕುಡಿಯುವ ನೀರು ಹಾಗೂ ಕಂದಾಯ ಗ್ರಾಮಗಳ ವಿಷಯಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೇಸಿಗೆ ಕಾಲದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರತಿ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿನ ನೀರಿನ ಘಟಕಗಳಲ್ಲಿ ನಿಯಮಿತವಾಗಿ ನೀರಿನ ಗುಣಮಟ್ಟ ಪರೀಕ್ಷೆ ನಡೆಸಬೇಕು. ನೀರಿನ ಸಮಸ್ಯೆ ಕಂಡು ಬರುವ ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಸಬೇಕು. ಒಂದು ವೇಳೆ ಖಾಸಗಿ ಕೊಳವೆ ಬಾವಿಗಳು ಲಭ್ಯವಿಲ್ಲದಿದ್ದರೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಕ್ರಮ ವಹಿಸಬೇಕು. ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

‘ಮಳೆಗಾಲದಲ್ಲಿ ಭೂಕುಸಿತ ಉಂಟಾದ ಸಂದರ್ಭದಲ್ಲಿ ಯಾವುದೇ ಅನಾಹುತಗಳಿಗೆ ಆಸ್ಪದ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಇದಕ್ಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

‘ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಪೋಡಿ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಬೇಕು. ಭೂ ಸುರಕ್ಷಾ ಯೋಜನೆಯಡಿ ಭೂ ದಾಖಲೆಗಳ ಡಿಜಿಟಲೀಕರಣವನ್ನು ಪೂರ್ಣಗೊಳಿಸಬೇಕು’ ಎಂದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ನಟೇಶ್, ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್, ಭೂ ದಾಖಲೆಗಳ ಉಪನಿರ್ದೇಶಕರು ಭಾಗವಹಿಸಿದ್ದರು.

374 ಕಂದಾಯ ಗ್ರಾಮ

ಜಿಲ್ಲೆಯಲ್ಲಿ ಹೊಸದಾಗಿ ಕಂದಾಯ ಗ್ರಾಮ ರಚನೆಗೆ ಮೊದಲ ಹಾಗೂ ಎರಡನೆಯ ಹಂತದಲ್ಲಿ 117 ಗ್ರಾಮಗಳನ್ನು ಮೂರನೇ ಹಂತದಲ್ಲಿ 257 ಗ್ರಾಮಗಳು ಸೇರಿ ಒಟ್ಟು 374 ಗ್ರಾಮಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಮಾಹಿತಿ ನೀಡಿದರು.

ಇವುಗಳಲ್ಲಿ 213 ಗ್ರಾಮಗಳಿಗೆ ಪ್ರಾಥಮಿಕ ಅಧಿಸೂಚನೆಯಾಗಿದ್ದು 89 ಪ್ರಕರಣಗಳು ಸರ್ಕಾರಕ್ಕೆ ಸಲ್ಲಿಕೆಯಾಗಿವೆ. 34 ಪ್ರಾಥಮಿಕ ಅಧಿಸೂಚನೆಗೆ ಬಾಕಿ ಉಳಿದಿವೆ ಎಂದರು. ತಹಶೀಲ್ದಾರ್ ಅವರಿಂದ ಪ್ರಸ್ತಾವನೆ ಸಲ್ಲಿಸಲು 8 ಪ್ರಕರಣಗಳು ಬಾಕಿ ಉಳಿದಿದ್ದವು 7 ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. 203 ಪ್ರಕರಣಗಳು ಅಂತಿಮ ಅಧಿಸೂಚನೆಯಾಗಿವೆ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.