ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಭಾ ಕಾರಂಜಿಗೆ ಅನುದಾನ ಹೆಚ್ಚಳಕ್ಕೆ ಪ್ರಯತ್ನ

ಬಂಕೇನಹಳ್ಳಿ: ಪ್ರತಿಭಾ ಕಾರಂಜಿಯಲ್ಲಿ ಶಾಸಕ ಎಂ.ಪಿ.ಕುಮಾರಸ್ವಾಮಿ
Last Updated 14 ನವೆಂಬರ್ 2022, 16:18 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ಕೊಟ್ಟಿಗೆಹಾರ: ‘ಪ್ರತಿಭಾ ಕಾರಂಜಿಗೆ ಸರ್ಕಾರದಿಂದ ಅನುದಾನ ಹೆಚ್ಚಿಸಲು ಪ್ರಯತ್ನ ನಡೆಸಲಾಗುವುದು’ ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದರು.

ಬಣಕಲ್‌ ಸಮೀಪದ ಬಂಕೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ಮೂಡಿಗೆರೆ ತಾಲ್ಲೂಕು ಮಟ್ಟದ ಕಿರಿಯ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಉದ್ಘಾಟಿಸಿ ಅವರು ಮಾತನಾಡಿದರು.

ಶಿಥಿಲಾವಸ್ಥೆಯಲ್ಲಿದ್ದ ಸುಮಾರು 13 ಶಾಲೆಗಳ 21 ಕೊಠಡಿಗಳನ್ನು ಜೀರ್ಣೋದ್ಧಾರ ಮಾಡಲಾಗುತ್ತಿದೆ. ₹2.60 ಕೋಟಿ ಅನುದಾನ ನೀಡಲಾಗಿದೆ. ಮಲೆನಾಡಿನಲ್ಲಿ ಹೆಂಚಿನ ಕಟ್ಟಡಗಳನ್ನು ನಿರ್ಮಿಸಲು ಸರ್ಕಾರಕ್ಕೆ ಸಲಹೆ ನೀಡಲಾಗಿದೆ’ ಎಂದರು.

ಮಾಜಿ ಸಚಿವೆ ಮೋಟಮ್ಮ ಮಾತನಾಡಿ, ‘ಮಕ್ಕಳಲ್ಲಿ ಪ್ರತಿಭೆಯನ್ನು ಮೊದಲಿಗೆ ಗುರುತಿಸುವುದು ಶಿಕ್ಷಕರು. ಇಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳ ಪ್ರತಿಭೆಗೆ ವೇದಿಕೆ ಸಿಗುತ್ತದೆ' ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಹೇಮಂತ್ ರಾಜ್, ಗ್ರಾ.ಪಂ ಅಧ್ಯಕ್ಷ ಸತೀಶ್, ಉಪಾಧ್ಯಕ್ಷೆ ಶೀಲಾ, ಸದಸ್ಯರಾದ ಶಶಿಕಲಾ, ಜಾಬೀರ್ ಹುಸೇನ್, ಕೋಮಲ, ಕವೀಶ್, ಎಸ್‍ಡಿಎಂಸಿ ಅಧ್ಯಕ್ಷ ನಾಗರಾಜ್, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಶಾಂತಕುಮಾರ್, ಕ್ಷೇತ್ರ ಸಮನ್ವಯ ಅಧಿಕಾರಿ ಆಶಾ, ಗ್ರಾಮದ ಮುಖಂಡರಾದ ನಾರಾಯಣಗೌಡ, ಸುರೇಶ್‍ಗೌಡ, ಬಾಪು ದಿನೇಶ್, ಗಜೇಶ್, ಮುಖಂಡ ಹೊರಟ್ಟಿ ರಘು, ಶಿಕ್ಷಕರಾದ ಪುಟ್ಟರಾಜು, ಯಾಸ್ಮಿನ್, ಜೀಟಾಲೋಬೊ, ವೆಂಕಟೇಶ್ ನಾಯಕ್, ಜಯಂತ್ ನಾಯಕ್, ಚಂದ್ರಶೇಖರ್, ಮಾರ್ಗರೇಟ್ ಫೆರ್ನಾಂಡಿಸ್, ಶಿವನಂಜೆಗೌಡ, ವೀಣಾ, ಲಲಿತಮ್ಮ, ಸೌಭಾಗ್ಯ, ಶೋಭಾ, ಪೂರ್ಣೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT