ಮಂಗಳವಾರ, ಏಪ್ರಿಲ್ 20, 2021
31 °C

ದುಬೈನಲ್ಲಿ ಕೋವಿಡ್‌ಗೆ ಬಲಿಯಾದ ಕಳಸದ ಗರ್ಭಿಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಳಸ: ಇಲ್ಲಿನ ಮಹಾವೀರ ರಸ್ತೆಯ ಟೈಲರ್ ವಿಠಲ ಶೆಟ್ಟಿ ಅವರ ಪುತ್ರಿ ಶ್ರೇಯಾ ರೈ (24) ದುಬೈಯಲ್ಲಿ ಕೋವಿಡ್‌–19ನಿಂದ ಮೃತಪಟ್ಟಿದ್ದಾರೆ.

ಶ್ರೇಯಾ ಅವರು ಉಜಿರೆ ಎಸ್‍ಡಿಎಂ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಕಳೆದ ವರ್ಷ ಪಡುಬಿದ್ರಿಯ ಯುವಕನನ್ನು ವಿವಾಹವಾಗಿದ್ದ ಅವರು, 7 ತಿಂಗಳ ಗರ್ಭಿಣಿ ಆಗಿದ್ದರು.

ಕೆಲ ದಿನಗಳ ಹಿಂದೆ ಕೋವಿಡ್‌ ಸೋಂಕಿಗೆ ತುತ್ತಾಗಿದ್ದ ಅವರು, ನಂತರ ನ್ಯೂಮೋನಿಯಾದಿಂದ ಬಳಲುತ್ತಿದ್ದರು. ಶುಕ್ರವಾರ ಬೆಳಿಗ್ಗೆ ದುಬೈನ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು