ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡೂರು | ಶಾಲಾರಂಭಕ್ಕೆ ಸಿದ್ಧತೆ: ಪಠ್ಯ ಪುಸ್ತಕ ವಿತರಣೆ

Published 28 ಮೇ 2024, 7:15 IST
Last Updated 28 ಮೇ 2024, 7:15 IST
ಅಕ್ಷರ ಗಾತ್ರ

ಕಡೂರು: ಮೇ 29ರಿಂದ ಶಾಲೆಗಳು ಆರಂಭವಾಗುತ್ತಿದ್ದು,  ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಮತ್ತಿತರ ಪರಿಕರಗಳ ವಿತರಣೆಯನ್ನು ಶಿಕ್ಷಣ ಇಲಾಖೆ ಈಗಾಗಲೇ ಪ್ರಾರಂಭಿಸಿದೆ.

ಕಡೂರು ಶೈಕ್ಷಣಿಕ ವಲಯದಲ್ಲಿ 126 ಕಿರಿಯ ಪ್ರಾಥಮಿಕ ಶಾಲೆಗಳು, (3 ಅನುದಾನಿತ, 10 ಅನುದಾನ ರಹಿತ), 130 ಹಿರಿಯ ಪ್ರಾಥಮಿಕ ಶಾಲೆಗಳು (2 ಅನುದಾನ ಸಹಿತ ಮತ್ತು ಅನುದಾನ ರಹಿತ 14), ಸರ್ಕಾರಿ ಪ್ರೌಢ ಶಾಲೆಗಳು 15 ಇವೆ. ಈ ಎಲ್ಲ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯವರೆಗೆ 2023-24 ನೇ ಸಾಲಿನಲ್ಲಿ ಒಟ್ಟು 22,086 ಸಾವಿರ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ.

ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಉಚಿತವಾಗಿ ನೀಡಲಾಗುತ್ತದೆ. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಎರಡು ಜೊತೆ ಸಮವಸ್ತ್ರ ಉಚಿತವಾಗಿ ನೀಡಲಾಗುತ್ತದೆ. ಹೈ ಸ್ಕೂಲ್ ವಿದ್ಯಾರ್ಥಿನಿಯರಿಗೆ ಈ ವರ್ಷದಿಂದ ಸಮವಸ್ತ್ರಕ್ಕಾಗಿ ಚೂಡಿದಾರವನ್ನು ನೀಡಲಾಗುತ್ತಿದೆ.

ಕಳೆದ ವರ್ಷ ದಾಖಲಾತಿ ಕೊರತೆಯಿಂದ ತಾಲ್ಲೂಕಿನ ಆಡಿಗೆರೆ, ವೈ.ಬಸವನಹಳ್ಳಿ, ದೇವರಹೊಸಹಳ್ಳಿ ಹುಲಿಗೊಂದಿ ಮತ್ತು ಮಾವಿನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರಭುಕುಮಾರ ಸ್ವಾಮಿ ಅನುದಾನಿ ಪ್ರೌಡ ಶಾಲೆಗಳನ್ನು ಮುಚ್ಚಲಾಗಿತ್ತು. ಈ ಸಂಖ್ಯೆ ಹೆಚ್ಚಬಾರದು ಎಂಬ ಉದ್ದೇಶದಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸಲು ದಾಖಲಾತಿ ಆಂದೋಲನವನ್ನು ಈಗಾಗಲೇ ಇಲಾಖೆ ಹಮ್ಮಿಕೊಂಡಿದೆ. ಸರ್ಕಾರಿ ಶಾಲೆಗಳಲ್ಲಿರುವ ಸೌಲಭ್ಯಗಳು ಮತ್ತು ಗುಣಮಟ್ಟದ ಬಗ್ಗೆ ಪೋಷಕರಿಗೆ ಮನವರಿಕೆ ಮಾಡಿಕೊಟ್ಟು ಮಕ್ಕಳನ್ನು ದಾಖಲಾತಿ ಮಾಡಲು ಅವರ ಮನವೊಲಿಸುವ ಕಾರ್ಯವನ್ನು ಶಿಕ್ಷಕರು ತಮ್ಮ ಶಾಲಾ ವ್ಯಾಪ್ತಿಯಲ್ಲಿ ಮಾಡುತ್ತಿದ್ದಾರೆ.

ಮೇ 29ರ ಬುಧವಾರ ಶಾಲೆಗಳು ಆರಂಭವಾಗಲಿದ್ದು, ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಾಲೆಗಳನ್ನು ಸಿಂಗರಿಸಲಾಗುತ್ತಿದೆ. ಅಂದು ವಿದ್ಯಾರ್ಥಿಗಳಿಗೆ ವಿಶೇಷವಾಗಿ ಸಿಹಿಯೂಟವನ್ನು ನೀಡಲು ಶಿಕ್ಷಕರು ಸಿದ್ಧತೆ ನಡೆಸಿದ್ದಾರೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಪಿ.ಲಿಂಗರಾಜು ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ದಾಖಲಾತಿ ಆಂದೋಲನ ನಡೆಸಲಾಗುವುದು
ಆರ್. ಸಿದ್ದರಾಜುನಾಯ್ಕ ಬಿಇಒ ಕಡೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT