ಮಂಗಳವಾರ, ಏಪ್ರಿಲ್ 7, 2020
19 °C

ಪಾಕಿಸ್ತಾನ ಪರ ಘೋಷಣೆ: ಚಿಕ್ಕಮಗಳೂರಿನಲ್ಲಿ ಅಮೂಲ್ಯಾ ವಿರುದ್ಧ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

protest in Chikmagalur

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪದ ಗುಬ್ಬಗದ್ದೆಯ ಯುವತಿ ಅಮೂಲ್ಯ ‘ಪಾಕಿಸ್ತಾನ ಜಿಂದಾಬಾದ್‌’ ಘೋಷಣೆ ಕೂಗಿದ್ದನ್ನು ವಿರೋಧಿಸಿ ವಿವಿಧ ಪಕ್ಷ, ಸಂಘಟನೆಗಳವರು ಕೊಪ್ಪದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಪುರಭವನದಿಂದ ಬಸ್‌ ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಸ್‌ ನಿಲ್ದಾಣದಲ್ಲಿ ಅಮೂಲ್ಯ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಅಮೂಲ್ಯಗೆ ಜಾಮೀನು ನೀಡಬಾರದು, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು. ನಂತರ ಶಿರಸ್ತೇದಾರ್‌ಗೆ ಮನವಿ ಪತ್ರ ಸಲ್ಲಿಸಿದರು. 

ಅಮೂಲ್ಯ ಮನೆಗೆ ಕಲ್ಲು ತೂರಾಟ: ಕೊಪ್ಪ ತಾಲ್ಲೂಕಿನ ಹಿರೇಕೂಡಿಗೆ ಸಮೀಪದ ಗುಬ್ಬಗದ್ದೆಯಲ್ಲಿರುವ ಅಮೂಲ್ಯ ಮನೆ ಮೇಲೆ ಗುರುವಾರ ರಾತ್ರಿ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ. ಕಿಟಕಿ ಗಾಜುಗಳು ಒಡೆದಿವೆ.

ಕಲ್ಲು ತೂರಿದ್ದಕ್ಕೆ ಸಂಬಂಧಿಸಿದಂತೆ ಒಂಬತ್ತು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮನೆ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು