ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ಯಡಿಯೂರಪ್ಪ ಮುಂದುವರಿಕೆಗೆ ಒತ್ತಾಯ

ಮುಖ್ಯಮಂತ್ರಿ ಬದಲಾವಣೆ ವಿರೋಧಿಸಿ ಸಂಘಟನೆಗಳಿಂದ ಪ್ರತಿಭಟನೆ
Last Updated 25 ಜುಲೈ 2021, 3:10 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ಬಿಜೆಪಿ ಹೈಕಮಾಂಡ್ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸ ಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತ ವೀರಶೈವ ಮಹಾಸಭಾ, ವೀರ ಶೈವ ಲಿಂಗಾಯತ ಸಂಘದ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಕಾರರು, ಬಿಜೆಪಿ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿದರು.

ವೀರಶೈವ ಲಿಂಗಾಯತ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎ.ಶಿವಶಂಕರ್ ಮಾತನಾಡಿ, ‘ಯಡಿಯೂರಪ್ಪ ಅವರು ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ನಾಯಕರು. ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಪ್ರಥಮ ಬಾರಿಗೆ ಅಧಿಕಾರಕ್ಕೆ ತಂದ ಹೆಗ್ಗಳಿಕೆ ಅವರಿಗೆ ಸೇರುತ್ತದೆ. ಅವರು ತಳಮಟ್ಟದಿಂದ ಪಕ್ಷ ಸಂಘಟಿಸಿದ್ದಾರೆ. ಕೋವಿಡ್‌–19 ತಲ್ಲಣದಿಂದಾಗಿ ಅವರು ಎರಡು ವರ್ಷ ಸಮರ್ಥ ಬಜೆಟ್ ಮಂಡಿಸಲು ಸಾಧ್ಯವಾಗಿಲ್ಲ. ಐದು ವರ್ಷಗಳ ಪೂರ್ಣ ಅವಧಿಗೆ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವರಿ ಸಬೇಕು’ ಎಂದು ಒತ್ತಾಯಿಸಿದರು.

ಉಪಾಧ್ಯಕ್ಷ ಎಂ.ಎಸ್.ನಿರಂಜನ್ ಮಾತನಾಡಿ, ‘ಯಡಿಯೂರಪ್ಪ ಅವರು ಇಳಿ ವಯಸ್ಸಿನಲ್ಲಿಯೂ ಯುವಕರಂತೆ ಆಡಳಿತ ನಡೆಸಿದ್ದಾರೆ. ಎಲ್ಲ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ದರೆ, ರಾಜ್ಯದಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು’ ಎಂದರು.

ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಮೌಳಿ, ಕಾರ್ಯದರ್ಶಿ ಸಿ.ಬಿ.ನಂದೀಶ್, ಅಕ್ಕಮಹಾದೇವಿ ಮಹಿಳಾ ಸಂಘದ ಅಧ್ಯಕ್ಷೆ ಯಮುನಾ ಚನ್ನಬಸಪ್ಪ ಶೆಟ್ಟಿ, ಸಮುದಾಯದ ಮುಖಂಡರಾದ ಬಿ.ಜಿ.ಸೋಮಶೇಖರಪ್ಪ, ರವೀಶ್‌ಬಸಪ್ಪ, ಎಚ್‌.ಎಂ. ರೇಣುಕಾರಾಧ್ಯ, ಮುರುಗೇಂದ್ರ ಸ್ವಾಮಿ, ಸಿದ್ದೇಗೌಡ, ಗಿರಿರಾಜ್, ಓಂಕಾರಸ್ವಾಮಿ, ಬಿ.ಪಿ.ಜಗದೀಶ್, ನಂಜೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT