ತರೀಕೆರೆ: ಸುಪ್ರೀಂ ಕೋರ್ಟ್ನ ತೀರ್ಪಿನ ಪ್ರಕಾರ ರಾಜ್ಯ ಸರ್ಕಾರ ಒಳಮೀಸಲಾತಿ ಅನುಷ್ಠಾನಗೊಳಿಸಬೇಕು ಎಂದು ಪಟ್ಟಣದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು.

ತರೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾದಿಗ, ಛಲವಾದಿ ಹಾಗೂ ಅಲೆಮಾರಿ ಸಮಾಜಗಳ ಒಕ್ಕೂಟದಿಂದ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ, ಚಳವಳಿ ಮತ್ತು ತಮಟೆ ಚಳವಳಿ ಹಮ್ಮಿಕೊಳ್ಳಲಾಗಿತ್ತು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ತಾಲ್ಲೂಕು ಕಚೇರಿಗೆ ಬಂದು, ತಹಶೀಲ್ದಾರ್ ವಿಶ್ವಜೀತ್ ಮೇಹತ್ ಅವರಿಗೆ ಮನವಿ ಸಲ್ಲಿಸಿದರು.

ತರೀಕೆರೆ ತಾಲ್ಲೂಕು ಒಳಮೀಸಲಾತಿ ಹೋರಾಟ ಸಮಿತಿಯ ಮುಖಂಡರಾದ ಓಂಕಾರಪ್ಪ.ಎಂ., ಅಣ್ಣಯ್ಯ, ಸುನಿಲ್ ಡಿ.ಎನ್., ಹನುಮಂತಪ್ಪ ಎನ್., ರಾಮಚಂದ್ರ ಜೆ., ರಾಜು, ಬಸವರಾಜು, ಕೃಷ್ಣಮೂರ್ತಿ, ಮಹಂತೇಶ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.