ಬುಧವಾರ, ಸೆಪ್ಟೆಂಬರ್ 22, 2021
21 °C

ಮೂತ್ರ ನೆಕ್ಕಿಸಿದ ಪ್ರಕರಣ: ಆರೋಪಿ ಪಿಎಸ್‌ಐ ನ್ಯಾಯಾಂಗ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಿಎಸ್‌ಐ ಅರ್ಜುನ್‌

ಚಿಕ್ಕಮಗಳೂರು: ಪರಿಶಿಷ್ಟ ಜಾತಿಯ ಯುವಕರೊಬ್ಬರಿಗೆ ಮೂತ್ರ ನೆಕ್ಕಿಸಿದ ಆರೋಪ ಎದುರಿಸುತ್ತಿರುವ ಪಿಎಸ್‌ಐ ಅರ್ಜುನ್‌ ಅವರನ್ನು ನಗರದ ಒಂದನೇ ಹೆಚ್ಚುವರಿ ಸೆಷನ್ಸ್‌ ಕೋರ್ಟ್‌ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. 

ಸಿಐಡಿ ತಂಡವು ಅರ್ಜುನ್‌ ಅವರನ್ನು ಒಂದನೇ ಹೆಚ್ಚುವರಿ ಸೆಷನ್ಸ್‌ ಕೋರ್ಟ್‌ ನ್ಯಾಯಾಧೀಶರಾದ ಪುಷ್ಪಾಂಜಲಿ ಅವರ ಮುಂದೆ ಗುರುವಾರ ಹಾಜರುಪಡಿಸಿತ್ತು.

ಮೂಡಿಗೆರೆ ತಾಲ್ಲೂಕಿನ ಕಿರಗುಂದ ಗ್ರಾಮದ ಪುನೀತ್‌ಗೆ ಗೋಣಿಬೀಡು ಠಾಣೆಯಲ್ಲಿ ಮೂತ್ರ ನೆಕ್ಕಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅರ್ಜುನ್‌ ಅವರನ್ನು ಬೆಂಗಳೂರಿನಲ್ಲಿ ಸಿಐಡಿ ಪೊಲೀಸರು ಬುಧವಾರ ಬಂಧಿಸಿದ್ದರು. 

ಇದನ್ನೂ ಓದಿ- ಚಿಕ್ಕಮಗಳೂರು: ಯುವಕನಿಗೆ ‘ಮೂತ್ರ ನೆಕ್ಕಿಸಿದ್ದ’ ಪಿಎಸ್ಐ ಅರ್ಜುನ್‌ ಬಂಧನ

ವಿಚಾರಣೆ ನಿಟ್ಟಿನಲ್ಲಿ ಅರ್ಜುನ್‌ ಅವರನ್ನು ವಶಕ್ಕೆ ನೀಡುವಂತೆ ಸಿಐಡಿ ಪೊಲೀಸರು ಕೋರ್ಟ್‌ಗೆ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು