ಶುಕ್ರವಾರ, ಜುಲೈ 30, 2021
22 °C

ಮೂತ್ರ ನೆಕ್ಕಿಸಿದ ಆರೋಪ: ಪಿಎಸ್‌ಐ ಅಮಾನತು; ಸಿಐಡಿಗೆ ತನಿಖೆ ಹೊಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ‘ವಿಚಾರಣೆ ನೆಪದಲ್ಲಿ ಠಾಣೆಗೆ ಕರೆದೊಯ್ದು ಮೂತ್ರ ನೆಕ್ಕಿಸಿದ್ದಾರೆ’ ಎಂದು ಮೂಡಿಗರೆ ತಾಲ್ಲೂಕಿನ ಕಿರುಗುಂದ ಗ್ರಾಮದ ಪರಿಶಿಷ್ಟ ಸಮುದಾಯದ ಕೆ.ಎಲ್‌.ಪುನೀತ್‌ ದಾಖಲಿಸಿರುವ ದೂರಿಗೆ ಸಂಬಂಧಿಸಿದಂತೆ ಪಿಎಸ್‌ಐ ಅರ್ಜುನ್‌ ಅವರನ್ನು ಅಮಾನತುಗೊಳಿಸಲಾಗಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

‘ಪಶ್ವಿಮ ವಲಯ ಐಜಿಪಿ ಅವರು ಪಿಎಸ್‌ಐ ಅರ್ಜುನ್‌ ಅವರನ್ನು ಅಮಾನತುಗೊಳಿಸಿ, ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ’ ಎಂದು ಜಿಲ್ಲಾ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಎಂ.ಹಾಕೆ ‘ಪ್ರಜಾವಾಣಿ’ಗೆ ತಿಳಿಸಿದರು.

ಇಲಾಖಾ ತನಿಖೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಡಿವೈಎಸ್ಪಿ ಅವರಿಗೆ ವಹಿಸಲಾಗಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: 

‘ಪ್ರಕರಣಕ್ಕೆ ಸಂಬಂಧಿಸಿದಂತೆ ಹಿನ್ನೆಲೆ, ಸಂಗತಿಗಳು ಇವೆ. ಪ್ರಕರಣ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಸಂಗತಿಗಳು ಹರಿದಾಡುತ್ತಿವೆ. ತನಿಖೆ ಬಳಿಕ ಸತ್ಯಾಂಶ ಗೊತ್ತಾಗಲಿದೆ. ಜನರು ಸತ್ಯವನ್ನು ತಿಳಿದುಕೊಳ್ಳಬೇಕು’ ಎಂದರು.

ಐಪಿಸಿ 323 (ಹಲ್ಲೆ), 330 (ಉದ್ದೇಶಪೂರ್ವಕವಾಗಿ ನೋವುಂಟು ಮಾಡುವುದು), 342 (ಅಕ್ರಮ ಬಂಧನ), 506 (ಜೀವ ಬೆದರಿಕೆ) ಹಾಗೂ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು